
K2 ಪೊಲಿಟಿಕಲ್ ನ್ಯೂಸ್ : ಮೈಸೂರು ಭಾಗದ ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳು ಇದೀಗ ಮೂರು ರಾಜಕೀಯ ಪಕ್ಷಗಳಿಗೆ ಜಿದ್ಧಾಜಿದ್ದಿಯ ಕಣವಾಗಿದೆ. ಒಕ್ಕಲಿಗ ಸಮುದಾಯ ಓಲೈಸುವ ನಿಟ್ಟಿನಲ್ಲಿ ಬಿಜೆಪಿ ಇದೀಗ ಆರ್ ಅಶೋಕ್ ಅವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
2023ರ ಚುನಾವಣೆ ಗೆಲ್ಲುವ ತಂತ್ರದಿಂದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆರ್.ಅಶೋಕ್ ಅವರನ್ನು ನೇಮಿಸಲಾಗಿದೆ ಎಂಬ ಚರ್ಚೆ ಶುರುವಾಗಿದೆ. ಮಂಡ್ಯದ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಕೆ.ಆರ್.ಪೇಟೆಯಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದೆ. ಉಳಿದ ಆರೂ ಕ್ಷೇತ್ರಗಳಲ್ಲಿ ಜೆಡಿಎಸ್ ಇದೆ. ಹಾಗಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಿದ್ಧತೆಯಾಗಿ ಒಕ್ಕಲಿಗ ಸಮುದಾಯದ ಸಚಿವ ಅಶೋಕ್ ಅವರನ್ನು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂಬುದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.
![]() |
![]() |
![]() |
![]() |
![]() |
[ays_poll id=3]