This is the title of the web page
This is the title of the web page
Politics News

ಮಾನ್ವಿ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಯಾವ ಕ್ಷೇತ್ರಕ್ಕೆ ಯಾರ್ಗೆ ಟಿಕೆಟ್.?


K2 ಪೊಲಿಟಿಕಲ್ ನ್ಯೂಸ್ : ಮುಂಬರುವ ವಿಧಾನಸಭಾ ಚುನಾವಣೆಗೆ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಹೈಕಮಾಂಡ್‌ ಪ್ರಕಟಿಸಿದ್ದು, ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿ ಘೋಷಣೆ ಮಾಡಿಲ್ಲ.

ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಒಬಿಸಿ -32, ಎಸ್‌ಸಿ -30, ಎಸ್‌ಟಿ- 16 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆಗೆ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಈಗಾಗಲೇ 166 ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇತ್ತ ಜೆಡಿಎಸ್‌ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕೆಲವು ತಿಂಗಳ ಹಿಂದೆಯೇ ಘೋಷಿಸಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ :

* ರಾಯಚೂರು ಗ್ರಾಮಾಂತರ (ಎಸ್‌ಟಿ)- ತಿಪ್ಪರಾಜು ಹವಾಲ್ದಾರ್‌
* ರಾಯಚೂರು- ಡಾ. ಶಿವರಾಜ ಪಾಟೀಲ
* ದೇವದುರ್ಗ (ಎಸ್‌ಟಿ)- ಕೆ. ಶಿವನಗೌಡ ನಾಯಕ
* ಲಿಂಗಸುಗೂರು (ಎಸ್‌ಸಿ)- ಮಾನಪ್ಪ ಡಿ. ವಜ್ಜಲ್‌
* ಸಿಂಧನೂರು- ಕೆ. ಕರಿಯಪ್ಪ
* ಮಸ್ಕಿ (ಎಸ್‌ಟಿ)- ಪ್ರತಾಪಗೌಡ ಪಾಟೀಲ
* ಮಾನ್ವಿ – ….?

ರಾಯಚೂರು ಜಿಲ್ಲೆಯಲ್ಲಿ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ಯಾವುದೇ ಕ್ಷೇತ್ರದ ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗಿಲ್ಲ, ಇತ್ತ ಜೆಡಿಎಸ್ ಪಕ್ಷದಲ್ಲಿ ಲಿಂಗಸುಗೂರು ಸಿಂಧನೂರು ದೇವದುರ್ಗ ಹೊರತುಪಡಿಸಿದರೆ ಉಳಿದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮವಾಗಿಲ್ಲ.


[ays_poll id=3]