K2kannadanews.in
Local News ರಾಯಚೂರು: ದಕ್ಷಿಣ ಮಧ್ಯೆ ರೈಲ್ವೆ ಗುಂತಕಲ್ ವಿಭಾಗದ ವ್ಯಾಪ್ತಿಗೆ ಬರುವ ರಾಯಚೂರು ರೈಲ್ವೆ ಸ್ಟೇಷನ್ ಮುಂಭಾಗದಲ್ಲಿ ಇಂದು ಸಂಜೆ ಬಾಂಬ್ ದಾಳಿಯ ಸಂದರ್ಭದಲ್ಲಿ ನಾಗರಿಕೆ ರಕ್ಷಣೆ ಮಾಡುವ ಕುರಿತಾಗಿ ಅಣಕು ನಾಗರಿಕರ ರಕ್ಷಣಾ ಕಾರ್ಯಾಚರಣೆ (ಮಾಕ್ ಡ್ರಿಲ್) ಮಾಡಲಾಯಿತು.
ರೈಲ್ವೆ ಸಿವಿಲ್ ಡಿಫೆನ್ಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ತಂಡದಿಂದ ಮಾಕ್ ಡ್ರಿಲ್ ಮಾಡಿದ್ದು, ದೇಶದಲ್ಲಿ ಶತೃ ರಾಷ್ಟ್ರ ಬಾಂಬ್ ಅಥವಾ ಯಾವುದೇ ವೈಮಾನಿಕ ದಾಳಿಯ ಸಂದರ್ಭದಲ್ಲಿ ನಾಗರಿಕ ರಕ್ಷಣೆ ಯಾವ ರೀತಿಯಲ್ಲಿ ಮಾಡಲಾಗುತ್ತೆ ಎಂಬುದರ ಬಗ್ಗೆ ಅಣಕು ಪ್ರದರ್ಶನ ಮಾಡಲಾಯಿತು. ಆರಂಭದಲ್ಲಿ ಪಟಾಕಿ ಸಿಡಿಸಿ ಅದನ್ನು ಬಾಂಬ್ ದಾಳಿಯಾಗಿದೆ ಎಂದು ಘೋಷಣೆ ಮಾಡುತ್ತಾ ಹಸಿರು ಹಾಗೂ ಕೆಂಪು ಬಾವುಟ ಪ್ರದರ್ಶಿಸಿ ನಾಗರಿಕರಿಗೆ ದಾಳಿಯ ಕುರಿತು ಡಂಗುರ ಸಾರಲಾಯಿತು. ಬಳಿಕ ದಾಳಿಯಿಂದ ಗಾಯಗೊಂಡು ನೆಲಕ್ಕೆ ಬಿದ್ದವರು ಚೀರಾಡುತ್ತಾ ಸಹಾಯಕ್ಕೆ ಕೋರಿದ್ದರು ಅವರ ಅನೇಕರು ಕೈ ಕಾಲು,ತಲೆಗೆ ಗಾಯಗೊಂಡವರನ್ನು ತಮ್ಮ ಭುಜದ ಮೇಲೆ, ಸ್ಟ್ರೇಚರ್
ಮೂಲಕ ತುರ್ತು ಚಿಕಿತ್ಸಾ ಘಟಕಕ್ಕೆ ಸಾಗಣೆ ಮಾಡಿದರು.
ಮತ್ತೊಂದೆಡೆ ಅಗ್ನಿ ದುರಂತ ಸಂಭವಿಸಿದಾಗ ಯಾವ ರೀತಿಯಲ್ಲಿ ನಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಟ್ಟಿಗೆ ಗಳಿಗೆ ಬೆಂಕಿ ಹೊತ್ತಿಸಿ ಅಣಕು ಪ್ರದರ್ಶನ ಮಾಡಲಾಯಿತು. ಇದೆ ವೇಳೆ ದಾಳಿಯಲ್ಲಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಾಗ ಯಾವ ರೀತಿಯಲ್ಲಿ ಪ್ರಾಣ ಕಾಪಾಡಬೇಕು ಎಂಬುವುದರ ಕುರಿತು ಪ್ರಯಾಣಿಕರಿಗೆ, ನೆರೆದ ಸಾರ್ವಜನಿಕರಿಗೆ ತಿಳಿಸಲಾಯಿತು.