This is the title of the web page
This is the title of the web page
Local News

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ 12ನೆಯ ಘಟಿಕೋತ್ಸವ


ರಾಯಚೂರು : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಹನ್ನೆರಡನೆಯ ಘಟಿಕೋತ್ಸವವು ಜುಲೈ 28ರಂದು ಜರುಗಲಿದ್ದು, ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ| ಥಾವರ್ ಚಂದ್ ಗೆದ್ದೋಟ್ ಆಗಮಿಸಲಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಿ.ಎಂ ಹನುಮಂತಪ್ಪ ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾ ದ್ರೋಹದಲ್ಲಿ ಘಟಿಕೋತ್ಸವ ಕಾರ್ಯಕ್ರಮವನ್ನು ಆ ಯೋಜನೆ ಮಾಡಲಾಗಿದೆ, ಇವಳೇ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಸಹಕುಲಾಧಿಪತಿಗಳು ಹಾಗೂ ಕರ್ನಾಟಕ ಸರ್ಕಾರದ ಸಾರ ಕೃಷಿ ಸಚಿವರಾದ ಎನ್‌. ಚಲುವರಾಯಸ್ವಾಮಿ ರವರು ಈ ಘಟಿಕೋತ್ಸವಕ್ಕೆ ಆಗಮಿಸಲಿದ್ದಾರೆ. ಘಟಿಕೋತ್ಸವಕ್ಕೆ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಹಾಗೂ ಘಟಿಕೋತ್ಸವ ಭಾಷಣ ಮಾಡಲು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಮಹಾನಿರ್ದೇಶಕರಾದ ಡಾ. ಹಿಮಾಂಶು ಪಾಠಕ್ ರವರು ಆಗಮಿಸುತ್ತಿದ್ದಾರೆ. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವೃದಾವಣ ತುಂಡಳಿಯ ಗೌರವಾಡ ಸದಸ್ಯರುಗಳು, ವಿದ್ಯಾವಿಷಯಕ ಪರಿಷತ್ತಿ ಸದಸ್ಯರುಗಳು, ಪದವಿ, ಸುರಸ್ಕೃತ ವಿದ್ಯಾರ್ಥಿಗಳು, ಗುರು, ಹಿತೈಷಿಗಳು ಹಾಗೂ ವಿಶ್ವವಿದ್ಯಾಲಯದ ಅತಿಥಿಗಳು ಉಪಸ್ಥಿತರಿರುವರು ಎಂದು ಹೇಳಿದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ವಿಷಯಗಳಲ್ಲಿ ಗುಣಮಟ್ಟದ ಶಿಕ್ಷಣ, ಸಮಗ್ರ ಕೃಷಿ ಹಾಗೂ ಉದ್ಯಮ ಅಭಿವೃದ್ಧಿಗೆ ಪೂರಕವಾದ ಸಂಶೋಧನೆ ಮತ್ತು ಸಂಶೋಧನೆಯ ಫಲಿತಾಂಶಗಳನ್ನು ರೈತ ಸಮುದಾಯಕ್ಕೆ ಒದಗಿಸುವುದಲ್ಲದೇ, ಅವುಗಳನ್ನು ಆಳವಡಿಸಲು ವಿಸ್ತರಣಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು, ಆದ್ದ ಕರ್ತವ್ಯವಾಗಿದೆ. ವಿಶ್ವವಿದ್ಯಾಲಯವು 22 ನವೆಂಬರ್, 2008 ರಂದು ಸ್ಥಾಪನೆಗೊಂಡ ನಂತರ ತನ್ನ ಹದಿಮೂರು ವರ್ಷಗಳ ಸಾರ್ಥಕ ಸೇವೆಯನ್ನು ರೈತರ ಅಭ್ಯುದಯಕ್ಕಾಗಿ ಮುಡುಪಿಡುವುದರ ಜೊತೆಗೆ ಕೃಷಿ ಹಾಗೂ ಕೃಷಿ ಇಂಜಿನಿಯರಿಂಗ್‌ಗಳಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಶೈಕ್ಷಣಿಕ ಕಾರ್ಯಕ್ರಮಗಳ ಪ್ರಗತಿ ಮುಂದುವರೆದಿವೆ ಎಂದರು.


[ays_poll id=3]