K2kannadanews.in
Darshan murder case ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪದಡಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಪ್ಟ್ ಮಾಡೋದಕ್ಕೆ ಕೋರ್ಟ್ ಅನುಮತಿ ನೀಡಿದೆ.
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಫೋಟೊ ಮತ್ರು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದ್ದಂತೆ, ವ್ಯಾಪಕ ಆಕ್ರೋಶ ವ್ಯಕ್ತವಾಗಿ, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ ಸ್ಥಳಾಂತರಕ್ಕೆ ಆದೇಶ ನೀಡಿದೆ. ದರ್ಶನ್ ಮಾತ್ರವಲ್ಲದೇ, ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿನ ಎಲ್ಲ ಆರೋಪಿಗಳು ರಾಜ್ಯದ
ಬೇರೆ ಬೇರೆ ಜೈಲಿಗೆ ಸ್ಥಳಾಂತರಗೊಳ್ಳಲಿರುವ ಕುರಿತು ಪೊಲೀಸರಿಗೆ ನ್ಯಾಯಾಲಯದಿಂದ ಆದೇಶ ಬಂದಿದೆ ಎಂದು ಹೇಳಲಾಗುತ್ತಿದೆ.
ಆರೋಪಿಗಳ ಸ್ಥಳಾಂತರಕ್ಕೆ ಮುಖ್ಯ ಅಧೀಕ್ಷಕರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಆದೇಶ ಸಿಕ್ಕಿರುವುದರಿಂದ ಎಲ್ಲ ಆರೋಪಿಗಳ ಸ್ಥಳಾಂತರ ಪ್ರಕ್ರಿಯೆ ಆರಂಭಿಸಲಾಗಿದೆ. ಸ್ಥಳತಾರವಾದ ನಂತರ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವ ವ್ಯವಸ್ಥೆ ಮಾಡಬಹುದು ಎನ್ನಲಾಗುತ್ತಿದೆ.
ಇನ್ನೂ ಪವನ್, ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ, ಜಗದೀಶ್ಗೆ ಶಿವಮೊಗ್ಗ ಜೈಲು, ಧನರಾಜ್ಗೆ ಧಾರವಾಡ ಜೈಲು ಪಾಲಾಗಲಿದ್ದಾರೆ. ವಿಜಯಪುರ ಜೈಲಿಗೆ ವಿನಯ್ ಸ್ಥಳಾಂತರ ವಾಗಬೇಕಿದೆ. ನಾಗರಾಜ್ ಕಲಬುರಗಿ ಜೈಲು, ಲಕ್ಷ್ಮಣ ಶಿವಮೊಗ್ಗ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಸ್ಥಳಾಂತರ ಆಗಲಿದ್ದಾರೆ.
ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರದಲ್ಲೇ ಮುಂದುವರಿಯಲಿದ್ದಾರೆ. ಜಾಮೀನುಗಾಗಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದು ಆಗಸ್ಟ್ 28ಕ್ಕೆ ಅದರ ವಿಚಾರಣೆ ಮುಂದೂಡಲಾಗಿದೆ.
ಪ್ರಕರಣದ ಇನ್ನಿತರ ಆರೋಪಿಗಳಾದ ರವಿ, ಕಾರ್ತಿಕ್, ನಿಕಿಲ್, ಕೇಶವಮೂರ್ತಿ ಈಗಾಗಲೇ ತುಮಕೂರು ಜೈಲಿನಲ್ಲಿದ್ದಾರೆ.