
K2 ನ್ಯೂಸ್ ಡೆಸ್ಕ್ : ರಾಮನಗರದ ರಾಮ ದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಮದೇವರ ಬೆಟ್ಟ ಐತಿಹಾಸಿಕವಾದುದು. ಹೊಸ ರಾಮಮಂದಿರ ನಿರ್ಮಾಣ ಮಾಡಬೇಕೆಂದು ಹಲವಾರು ಜನರ ಇಚ್ಛೆಯಾಗಿತ್ತು. ನನ್ನ ಪ್ರಕಾರ ಯಾರೂ ಇದಕ್ಕೆ ವಿರೋಧ ಮಾಡುವುದಿಲ್ಲ. ವಿರೋಧ ಮಾಡುವವರು ವಿರೋಧಿಸಲಿ. ನನ್ನ ತಕಾರಾರಿಲ್ಲ ಎಂದರು.
ಮಾತಿಗೆ ತಪ್ಪಿದ ಮಗ : ಕಾಂಗ್ರೆಸ್ ಅವರು ಇಷ್ಟು ದಿನ ಜನರ ಕಿವಿಗೆ ಹೂವಿಟ್ಟಿದ್ದರು. ಸಿದ್ದರಾಮಯ್ಯ ಅವರು ಮಾತಿಗೆ ತಪ್ಪಿದ ಮಗ. ಬಜೆಟ್ ನಲ್ಲಿ ಹೇಳಿದ್ದ ಯಾವುದನ್ನೂ ಅನುಷ್ಠಾನ ಮಾಡಿಲ್ಲ. ಮೊದಲು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದರು. ಆಮೇಲೆ ಅದನ್ನು 4 ಕೆಜಿಗೆ ಇಳಿಸಿದರು. ಚುನಾವಣೆ ಸಮಯದಲ್ಲಿ 7 ಕೆಜಿಗೆ ಏರಿಸಿದರು. ಹೀಗೆ ಜನರನ್ನು ಯಾಮಾರಿಸಿದ್ದಾರೆ. ಅವರಿಗೆ ಜನ ಶಾಶ್ವತವಾಗಿ ಹೂವಿಡುವ ಕೆಲಸವಾಗುತ್ತದೆ ಎಂದರು.
![]() |
![]() |
![]() |
![]() |
![]() |
[ays_poll id=3]