This is the title of the web page
This is the title of the web page
Politics News

ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಸಿಎಂ ಬೊಮ್ಮಾಯಿ*


K2 ಪೊಲಿಟಿಕಲ್ ನ್ಯೂಸ್ : ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬಿರಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದವಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ. ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದೆ ಎಂದು ಹೇಳಿದರು.

ಕಾಂಗ್ರೆಸ್ ನವರು ಹತಾಶರಾಗಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ನಾನು ಮಹಿಳೆಯರಿಗೆ ವಿಶೇಷ ಯೋಜನೆ ಜಾರಿಗೆ ತರುತ್ತೇನೆ ಎಂದು ಘೋಷಣೆ ಮಾಡಿದ್ದೆ, ಅದೇ ರೀತಿ ಅವರು ಹತಾಶ ಭಾವನೆಯಿಂದ ಯೋಜನೆ ಘೋಷಣೆ ಮಾಡಿದ್ದಾರೆ. ರಾಜ್ಯದ ಜನರು ಅದನ್ನು ಒಪ್ಪುವುದಿಲ್ಲ ಎಂದು ಹೇಳಿದರು.


[ays_poll id=3]