![]() |
![]() |
![]() |
![]() |
![]() |
ರಾಯಚೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನತೆಯ ಬೇಡಿಕೆಗಳನ್ನು ಸೇರಿಸುವ ನಿಟ್ಟಿನಲ್ಲಿ ಸ್ಟುಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವಿದ್ಯಾರ್ಥಿ ಪ್ರಣಾಳಿಕೆ ಹೊರತಂದಿದ್ದು ಜಾರಿಗೆ ಹಕ್ಕೊತ್ತಾಯ ಮಾಡುತ್ತಿದೆ ಎಂದು ಎಸ್‌ಐಓ ಸದಸ್ಯ ಜುಬೇರ್ ಖಾನ್ ಹೇಳಿದರು.
ಆರ್ಟಿಕಲ್ 21a ಮೂಲಕ ಸಂವಿಧಾನಬದ್ಧ ಮೂಲಭೂತ ಹಕ್ಕಾದ ಶಿಕ್ಷಣವು ಸರ್ಕಾರದ ಸ್ವಾಮ್ಯದಿಂದ ದಿನೇ ದಿನೇ ದುರ್ಬಲಗೊಳ್ಳುತ್ತ ಹೋಗುತ್ತಿರುವುದು ಶೋಚನೀಯ, ಮೂಲಭೂತ ಹಕ್ಕುಗಳು ಇವತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವ ದುರಂತ ಕಾಲದಲ್ಲಿ ಸಂವಿಧಾನ ಖಾತರಿಪಡಿಸಿದ ಶಿಕ್ಷಣದ ಹಕ್ಕನ್ನು (‘ಆರ್ಟಿಇ’ಯನ್ನು) ಸಮರ್ಪಕ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಶಾಲಾ ಪೂರ್ವ ಶಿಕ್ಷಣದ ಮೂಲಕ ಮಕ್ಕಳ ಅಪೌಷ್ಟಿಕತೆ ನಿವಾರಣೆ ಮತ್ತು ಕಲಿಕಾ ಪ್ರಕ್ರಿಯೆಯತ್ತ ತಯಾರುಗೊಳಿಸುವ ಅಂಗನವಾಡಿ ವ್ಯವಸ್ಥೆಯನ್ನು ಸಶಕ್ತಗೊಳಿಸಿ, ಅಪೌಷ್ಟಿಕತೆ ನಿವಾರಣೆಗೆ ಫಲಿತಾಂಶ ಆಧಾರಿತ ಕಾಲಾತೀತ ಕಾರ್ಯಕ್ರಮ ರೂಪಿಸಬೇಕಾಗಿದೆ.
ಗ್ರಾಮೀಣ ಮಕ್ಕಳ ಮತ್ತು ವಲಸೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳ ಶಾಲಾ ಹೊರಗುಳಿಯುವಿಕೆ (ಡ್ರಾಪ್ ಔಟ್) ದರವನ್ನು ತಡೆಗಟ್ಟಲು ಕಡ್ಡಾಯ ಶಿಕ್ಷಣ ಹಕ್ಕನ್ನು ಖಾತರಿಪಡಿಸಬೇಕು ಎಂದ ಅವರು, ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸಹಕಾರಿಯಾಗುವ ಸ್ಕಾಲರ್ಶಿಪ್ ಮತ್ತು ಶಾಲಾ ಸಮವಸ್ತ್ರ ದಂತಹ ಯೋಜನೆಗಳನ್ನು ಸಕಾಲಕ್ಕೆ ನೀಡಿ, ಶಾಲಾ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಮತ್ತು ಸೂಕ್ತ ಕಲಿಕಾ ಸಂಪನ್ಮೂಲ ಒದಗಿಸುವ ಮೂಲಕ ಶಾಲಾ ಚಟುವಟಿಕೆಗಳಲ್ಲಿನ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಗೆ ಕಲಿಕಾ ವಾತಾವರಣವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
![]() |
![]() |
![]() |
![]() |
![]() |
[ays_poll id=3]