ರಾಯಚೂರು : ಭಾರತ ದೇಶ ಪ್ರಜಾಪ್ರಭುತ್ವದ ದೇಶವಾಗಿದ್ದು, ದೇಶದಲ್ಲಿ ವಾಸಿಸುವ ಎಲ್ಲರೂ ಪ್ರಜಾಪ್ರಭುತ್ವದ ಒಂದು ಭಾಗವಾಗಿದ್ದೇವೆ. ಮತದಾನದ ಹಕ್ಕು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಕರ್ತವ್ಯವಾಗಿದ್ದು, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತದಾನದ ಹಕ್ಕನ್ನು ಪಡೆಯುವಲ್ಲಿ ಮುಂದಾಗಬೇಕೆಂದು ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು.
ನಗರದ ನವೋದಯ ವೈದ್ಯಕೀಯ ಮಹಗಾವಿದ್ಯಾಲಯದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸುವ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇತ್ತೀಚಿಗೆ ನಗರದ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಮದಾಯಿಸಿಕೊಳ್ಳಲು ಆಸಕ್ತಿ ತೋರಿಸಲು ಮುಂದಾಗುತ್ತಿಲ್ಲ. ಅಂಕಿ ಸಂಖ್ಯೆಗಳ ಪ್ರಕಾರ ನಗರ ಪ್ರದೇಶಗಳಲ್ಲಿ ಕೇವಲ ಶೇ.50 ರಷ್ಟು ಜನರು ಮಾತ್ರ ಮತದಾರರ ಪಟ್ಟಿಗೆ ಹೆಸರನ್ನು ನಿಂದಾಯಿಸಿಕೊಂಡು ಮತದಾನದ ಹಕ್ಕನ್ನು ಪಡೆಯಲು ಮುಂದಾಗುತ್ತಿದ್ದಾರೆ ಎಂದರು.
ಮತದಾನವೆಂಬುವುದು ಪ್ರತಿಯೊಬ್ಬರ ಹಕ್ಕು, ಭಾರತೀಯರಾದ ಪ್ರತಿಯೊಬ್ಬರು ಈ ಮೂಲಭೂತ ಹಕ್ಕನ್ನು ಪಡೆಯಲು ಮುಂದಾಗಬೇಕು. ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಸರ್ಕಾರದಿಂದ ವೋಟರ್ ಹೆಲ್ಪ್ ಲೈನ್ ಆಪ್ ತಯಾರಿಸಲಾಗಿದ್ದು, ಈ ಆಪ್ ಮುಖಾಂತರ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವುದು, ಪಟ್ಟಿಯಿಂದ ಹೆಸರನ್ನು ತೆಗೆದು ಹಾಕು ವುದು ಹಾಗೂ ಪಟ್ಟಿಯಲ್ಲಿರುವ ಹೆಸರು ಹಾಗೂ ಇನ್ನಿತರ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.
![]() |
![]() |
![]() |
![]() |
![]() |
[ays_poll id=3]