This is the title of the web page
This is the title of the web page
Crime News

ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ ಗಂಭೀರ ಗಾಯ


K2 ನ್ಯೂಸ್ ಡೆಸ್ಕ್: ರಿಷಬ್ ಪಂತ್ ದೆಹಲಿಯಿಂದ ರೂರ್ಕಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಭೀಕರವಾಗಿ ಕಾರು ಅಪಘಾತಕ್ಕೆ ಒಳಗಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಬಸ್ಮವಾದ ಘಟನೆ ಜರುಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಭ್ ಅವರ ಕಾರು ರೈಲಿಂಗ್ಗೆ ಡಿಕ್ಕಿ ಹೊಡೆದಿದೆ, ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ಬಹಳ ಕಷ್ಟಪಟ್ಟು ಹತೋಟಿಗೆ ತರಲಾಯಿತು. ಅದೇ ಸಮಯದಲ್ಲಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಭ್ ಪಂತ್ ಅವರನ್ನು ದೆಹಲಿ ರಸ್ತೆಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ತಿಳಿಸಿದ್ದಾರೆ.

ಕಾರು ಅಪಘಾತದಲ್ಲಿ ಗಾಯಗೊಂಡ ಕ್ರಿಕೆಟಿಗ ರಿಷಬ್ ಪಂತ್

ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ ಎನ್ನಲಾಗಿದೆ. ಇನ್ನೂ ಘಟನೆ ಮಾಹಿತಿ ಪಡೆದ ನಂತರ, ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪನ್ ಕಿಶೋರ್ ಸಿಂಗ್ ಸ್ಥಳಕ್ಕೆ ತಲುಪಿದ್ದಾರೆ. ಸದ್ಯ ರಿಷಭ್ ಪಂತ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುಶೀಲ್ ನಗರ್ ಮಾಹಿತಿ ನೀಡಿದ್ದಾರೆ.


[ays_poll id=3]