
ರಾಯಚೂರು : ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿ ವಿಳಂಬಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರ ವಿರುದ್ದ ಡಿಸೆಂಬರ್ 30 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು MRPS ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ ಹೇಳಿದರು.
ಮಾದಿಗ ದಂಡೋರ ರಾಷ್ಟ್ರೀಯ ಸಂಸ್ಥಾಪಕ ಮಂದಕೃಷ್ಣ ಮಾದಿಗರವರ ಆದೇಶದ ಮೇರೆಗೆ ರಾಜ್ಯದಲ್ಲಿ ನ್ಯಾಯಾಧೀಶ ಎ.ಜೆ.ಸದಾಶಿವ ಆಯೋಗ ಜಾರಿಗಾಗಿ ಸುಮಾರು 25 ವರ್ಷಗಳಿಂದ ನಿರಂತರವಾಗಿ ಮತ್ತು ವಿವಿಧ ರೀತಿಯ ಹೋರಾಟಗಳು ಹಮ್ಮಿಕೊಂಡು ಹೋರಾಟ ನಡೆಸುತ್ತಲೇ ಬಂದಿದ್ದೇವೆ.
ಆಳುವಂತಹ ಸರಕಾರಗಳು ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸಂಪೂರ್ಣವಾಗಿ ವಿಫಲಾವಾಗಿದೆ. 2022-23 ನೇ ಚಳಿಗಾಲ ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ವರದಿಯ ಕುರಿತು ಸಚಿವ ಗೋವಿಂದ ಕಾರಜೋಳ ಹಲವು ಬಾರಿ ನಮ್ಮ ಸಮುದಾಯಕ್ಕೆ ಸದನದಲ್ಲಿ ಚರ್ಚಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರಕಾರ ಕೂಡ ಆಶ್ವಾಸನೆ ನೀಡಿ ಈ ವರದಿಯನ್ನು ಜಾರಿ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ ಮತ್ತು ಬೇಜವಾಬ್ದಾರಿ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
![]() |
![]() |
![]() |
![]() |
![]() |
[ays_poll id=3]