This is the title of the web page
This is the title of the web page
Local News

ಮತದಾರರ ಪಟ್ಟಿಗೆ ಪ್ರತಿಯೊಬ್ಬರು ಹೆಸರನ್ನು ಸೇರ್ಪಡೆ ಮಾಡಿಕೊಳ್ಳಿ: ಶಶಿಧರ ಕುರೇರ


ರಾಯಚೂರು : ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಮತದಾನದ ಹಕ್ಕನು ಪಡೆಯಬೇಕು ಹಾಗೂ ಸುತ್ತಮುತ್ತಲಿನ ಜನರಿಗೂ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕರೇರ ಅವರು ಹೇಳಿದರು.

ಅವರು ಡಿ.01 ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿರುವವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಬೇಕು ಹಾಗೂ ಈಗಾಗಲೇ ಬಿಡುಗಡೆಯಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ ಹೆಸರು ಇಲ್ಲದೇ ಇದ್ದಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಇದೇ ವೇಳೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿ, ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಸರ್ಕಾರದಿಂದ ವೋಟರ್ ಹೆಲ್ಪ್ಲೈನ್ ಆ್ಯಪ್ ಬಿಡುಗಡೆಗೊಳಿಸಲಾಗಿದ್ದು, ಈ ಅಪ್ಲಿಕೇಷನ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಯಿಸಿಕೊಳ್ಳಬಹುದಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾತನಾಡಿ, ಮತದಾನವೆಂಬುವುದು ಪ್ರತಿಯೊಬ್ಬರ ಹಕ್ಕು, ಅದನ್ನು ಪಡೆಯುವುದು ಎಲ್ಲರ ಜವಾಬ್ದಾರಿಯೂ ಆಗಿರುತ್ತದೆ. ಆದ್ದರಿಂದ ಮತದಾನದ ಹಕ್ಕನ್ನು ಪಡೆಯಲು ಎಲ್ಲರೂ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ್, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲ ನಾಯಕ, ಮಾಸ್ಟರ್ ಟ್ರೆöÊನರ್ ಸದಾಶಿವಪ್ಪ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಪ್ಪ ಜಿಲ್ಲಾ ಪಂಚಾಯತ್ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


[ays_poll id=3]