This is the title of the web page
This is the title of the web page
Crime NewsState News

ಪುಟ್ಟ ಬಾಲಕಿ ಮೇಲೆ ಎರಗಿದ ಶಾಲಾ ಶಿಕ್ಷಕ ಅರೆಸ್ಟ್‌..


K2 ಕ್ರೈಂ ನ್ಯೂಸ್ : ಜ್ಞಾನ ನೀಡುವ ಗುರುವೇ ಭಕ್ಷಕನಾದರೆ ಮಕ್ಕಳ ಗತಿಯೇನು. ಎಂಬ ಪ್ರಶ್ನೆಗಳು ಕಾಡದೆ ಇರದು. ಕಾಮುಕ ಶಿಕ್ಷಕನೊಬ್ಬ ಅಪ್ರಾಪ್ತೆ ಮೇಲೆ ಎರಗಿ, ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ಈ ಕೃತ್ಯ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಯಾರಿಗೂ ಹೇಳದಂತೆ ಕಾಮುಕ ಶಿಕ್ಷಕ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲು ಆದಾಗ ಪ್ರಕರಣ ಬೆಳಕಿಗೆ ಬಂದಿದೆ.

ವೈದ್ಯರ ತಪಾಸಣೆ ವೇಳೆ ಅತ್ಯಾಚಾರವಾಗಿರುವುದು ತಿಳಿದು ಬಂದಿದೆ. ಸದ್ಯ ಕಾಮುಕ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಪೋಕ್ಸೋ ಪ್ರಕರಣದಡಿ ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


[ays_poll id=3]