This is the title of the web page
This is the title of the web page
Crime News

ಲಕ್ಷಾಂತರ ಮೌಲ್ಯದ ಶ್ರೀಗಂಧ ಕಟ್ಟಿಗೆ ವಶ : ಆರೋಪಿ ಪರಾರಿ


K2 ಕ್ರೈಂ ನ್ಯೂಸ್ : ಕಾನೂನುಬಾಹಿರವಾಗಿ ಮನೆಯಲ್ಲಿ ಅಕ್ರಮ‌ವಾಗಿ ದಾಸ್ತಾನು‌‌ ಮಾಡಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ನರೂರು ಗ್ರಾಮದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದ ಸದಾನಂದ ಬಸಪ್ಪ‌ ಗೌಡ ಅವರ ಮನೆಯ ಹಿಂಬಾಗದಲ್ಲಿ ಕಾನೂನು ಬಾಹಿರವಾಗಿ‌ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ದಾಸ್ತಾನು ಮಾಡಿಟ್ಟಿರುವ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಸುಮಾರು 2ಲಕ್ಷ 25 ಸಾವಿರ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತನಾದ ಸದಾನಂದ ಬಸಪ್ಪ ಗೌಡ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.


[ays_poll id=3]