
K2 ನ್ಯೂಸ್ ಡೆಸ್ಕ್ : ಸುಮಾರು 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯೋಜನೆಯನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ದೇಶದಲ್ಲಿಯೇ ಮೊಟ್ಟ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ ಕೀರ್ತಿ ನಮ್ಮ ರಾಜ್ಯದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಂಬರುವ ಓಲಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು 75 ಜನ ಕ್ರೀಡಾಪಟುಗಳನ್ಬು ಅಣಿಗೊಳಿಸಲು ಪ್ರತಿಭಾವಂತರನ್ನು ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಂಡಿದೆ. ಭಾರತ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಆಯೋಜಿಸಿರುವ 26 ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು,
ಯುವಜನರನ್ನು ಸ್ವಯಂ ಉದ್ಯೋಗಿಗಳನ್ನಾಗಿಸಲು ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯೋಜನೆ ಜಾರಿಗೊಳಿಸಲಿದೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಕೊಟ್ಟ ಧೀಮಂತ ಯೋಗಿಯಾಗಿದ್ದಾರೆ. ಧ್ಯಾನ ಮತ್ತು ಜ್ಞಾನವನ್ನು ಯುವಜನರಿಗೆ ಬೋಧಿಸಿದ ಮಹಾನ್ ಚೇತನ ಅವರಾಗಿದ್ದಾರೆ.
ಜನಸಂಖ್ಯೆ ಎಂದರೆ ಹೊರೆಯಲ್ಲ,ಅದು ಮಾನವಸಂಪತ್ತು ಅದರ ಸದ್ವಿನಿಯೋಗಪಡಿಸಿಕೊಂಡು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿದ್ದಾರೆ. ಖೇಲೋ ಇಂಡಿಯಾ ಮೂಲಕ ಯುವಜನತೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ ರಾಷ್ಟ್ರೀಯ ಯುವಜನೋತ್ಸವ ನಾಡಿನ ಯುವಜನರಲ್ಲಿ ಹೊಸ ಸ್ಫೂರ್ತಿ ತುಂಬಲಿ ಎಂದು ಆಶಿಸಿದರು.
![]() |
![]() |
![]() |
![]() |
![]() |
[ays_poll id=3]