
K2 ಕ್ರೈಂ ನ್ಯೂಸ್ : ತುಂತುರು ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಸರಣಿ ಅಪಘಾತ ಸಂಭವಿಸಿ, ಮೂವರು ಮೃತಪಟ್ಟ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಬಳಿ ಘಟನೆ ಜರುಗಿದೆ. ಮಳೆಯಿಂದ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ್ದ ಫಾರ್ಚೂನರ್ ಕಾರು ಎದುರಿಗೆ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗ್ತಿದ್ದ ಕಾರುಗಳು ರಭಸಕ್ಕೆ ಮೂವರ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು, ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಮೃತರ ಮಾಹಿತಿಯನ್ನು ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
![]() |
![]() |
![]() |
![]() |
[ays_poll id=3]