
K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಶಕ್ತಿ ಯೋಜನೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ತಂದೊಡ್ಡಿದೆ. ರಾಜ್ಯ ಸಾರಿಗೆ ನಿಗಮಗಳಿಗೆ ತಿಂಗಳಾಂತ್ಯಕ್ಕೆ ಸರ್ಕಾರ ಮಹಿಳೆಯರ ಪ್ರಯಾಣದ ಟಿಕೆಟ್ ಮೌಲ್ಯವನ್ನು ನೀಡುವಂತೆ ನಿಗಮಗಳು ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ, ಜೂನ್ 11 ರಂದು ಜಾರಿ ಮಾಡಲಾಯಿತು. ಜೂನ್ 11 ರಿಂದ 30 ರವರೆಗೆ ರಾಜ್ಯಾದ್ಯಂತ ಒಟ್ಟು 10.54 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಅದರ ಟಿಕೆಟ್ ಮೌಲ್ಯ 248.30 ಕೋಟಿ ರೂ. ಆಗಿದೆ. ಮಹಿಳೆಯರು ಉಚಿತ ಪ್ರಯಾಣದ ಟಿಕೆಟ್ ಮೌಲ್ಯದ ಹಣವನ್ನು ರಾಜ್ಯ ಸರ್ಕಾರವು ಪ್ರತಿ ತಿಂಗಳ ಅಂತ್ಯದೊಳಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಗಮಗಳಿಗೆ ನೀಡಬೇಕು. ಹಣವನ್ನು ಸರ್ಕಾರ ಪಾವತಿ ಮಾಡಿದ್ರೆ ನಿಗಮಗಳ ವೇತನ ಸೇರಿದಂತೆ ನಿರ್ವಹಣಾ ಕಾರ್ಯಕ್ಕೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ನಾಲ್ಕು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಲು ಮುಂದಾಗಿವೆ ಎನ್ನಲಾಗಿದೆ.
![]() |
![]() |
![]() |
![]() |
![]() |
[ays_poll id=3]