ರಾಯಚೂರು : ನಗರದ ಯರಮರಸ್ ನಲ್ಲಿ ರಾಜ್ಯಮಟ್ಟದ ಆಹ್ವಾನಿತ ಪುರುಷ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಶಾಸಕ ಶಿವರಾಜ್ ಪಾಟೀಲರಿಂದು ಚಾಲನೆ ನೀಡಿದರು.
ಜಿಲ್ಲಾ ಖೋ-ಖೋ ಆಸೋಸಿಯೇಷನ್ , ಆದಿಬಸವೇಶ್ವರ ಸ್ಪೋಟ್೯ ಕ್ಲಬ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಖೋ-ಖೋ ಸಂಸ್ಥೆಯ ಸಹಭಾಗಿತ್ವದಲ್ಲಿ 3 ದಿನಗಳ ಕಾಲ ಈ ಪಂದ್ಯಾವಳಿಗಳು ಜರುಗಲಿವೆ.
ಈ ವೇಳೆ ಮಾತನಾಡಿದ ನಗರ ಶಾಸಕ ಶಿವರಾಜ್ ಪಾಟೀಲ್ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದ್ದು ಜಿಲ್ಲೆಯ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದ್ದು , ಇಲ್ಲಿನ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿಯೂ ಮಿಂಚಲಿ ಎಂದರು.
ಈ ಪಂದ್ಯವಾಳಿಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಹಾಗೂ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎನ್.ಎಸ್ ಬೋಸರಾಜ್ ರವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು , ವಿವಿಧ ಜಿಲ್ಲೆಯ ಕ್ರೀಡಾಳುಗಳು ಉಪಸ್ಥಿತರಿದ್ದರು.
![]() |
![]() |
![]() |
![]() |
![]() |
[ays_poll id=3]