
ರಾಯಚೂರು : ಅಪರಿಚಿತ ವ್ಯಕ್ತಿಗಳಿಂದ ವೈದ್ಯರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆಯೊಂದು ರಾಯಚೂರಿನ ಸಾತ್ ಮೈಲ್ ಕ್ರಾಸ್ ಬಳಿ ನಡೆದಿದೆ.
ಹೌದು ಡಾ.ಜಯಪ್ರಕಾಶ ಬೆಟ್ಟದೂರು ಅವರು ಇಂದು ಮದ್ಯಾಹ್ನ 2.30ಕ್ಕೆ ರಾಯಚೂರಿನಿಂದ ಮಾನವಿಗೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾಥ ಮೈಲ್ ಕ್ರಾಸ್ ಹತ್ತಿರ ಈ ಚಿತ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರಿನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನ ಬಾನಟ್ ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ವೈದ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ದಾಳಿ ಮಾಡಿ ಹಾಗೆಯೇ ದ್ವಿಚಕ್ರ ವಾಹನದಲ್ಲಿ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಶೀಲನೆ ಮಾಡಿ ವಾಹನ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]