
ರಾಯಚೂರು : ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಗೋಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.
ರಾಯರ 352ನೇ ಆರಾಧನಾ ಮಹೋತ್ಸವಕ್ಕೆ ಶ್ರೀ ಮಠವು ಆರಾಧನೆಗಾಗಿ ವಿಶಿಷ್ಟ ರೀತಿಯ ದೀಪಾಲಂಕಾರ ಮತ್ತು ಪುಷ್ಪಾಲಂಕಾರ ಮಾಡುವ ಮೂಲಕ ಸಕಲ ಸಿದ್ಧತೆ ಮಾಡಿಕೊಂಡಿದೆ. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಅಶ್ವ ಪೂಜೆ, ಧಾನ್ಯ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಆರಾಧನಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಏಳು ದಿನಗಳ ಸಪ್ತರಾತ್ರೋತ್ಸವದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದರು. ಆರಾಧನಾ ಮಹೋತ್ಸವವು ಅತ್ಯಂತ ವಿಜ್ರಂಬಣೆಯಿಂದ ಮಠದಲ್ಲಿ ಆಚರಣೆ ಮಾಡಲಾಗುತ್ತಿದ್ದು,
ಆರಾಧನೆ ಹಿನ್ನೆಲೆಯಲ್ಲಿ ಮಠಕ್ಕೆ ಆಗಮಿಸುವ ಭಕ್ತರಿಗೆ ನದಿಯಲ್ಲಿ ನೀರಿನ ಕೊರತೆ ಎದುರಾಗಿದೆ, ಮಾಹಿತಿ ಲಭ್ಯವಾಗಿರುವ ಪ್ರಕಾರ ಅಲ್ಪ ಪ್ರಮಾಣದ ನೀರನ್ನ ನದಿಗೆ ಬಿಡಲಾಗಿದೆ. ಉಭಯ ರಾಜ್ಯಗಳ ಸರ್ಕಾರ ಮತ್ತು ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಮಾತನಾಡುವ ಮೂಲಕ ನದಿಗೆ ನೀರು ಬಿಡಿಸುವ ಪ್ರಯತ್ನ ಮಾಡಲಾಗುವುದು ಎಂದರು. ಈ ವೇಳೆ ಮಠಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯಾದಂತಹ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
![]() |
![]() |
![]() |
![]() |
![]() |
[ays_poll id=3]