This is the title of the web page
This is the title of the web page
State News

ಚುನಾವಣಾ ಕಸರ ದಿನ ನಡುವೆ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ


K2 ನ್ಯೂಸ್ ಡೆಸ್ಕ್ : ಕರ್ನಾಟಕ ವಿಧಾನಸಭಾ ಚುನಾವಣಾ ಕಸರತ್ತು ಜೋರಾಗಿದೆ. ಈ ಒತ್ತಡದ ನಡುವೆ ಸಿದ್ದರಾಮಯ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂರ್ಸ್ ಬೆಂಗಳೂರು ಪಂದ್ಯ ವೀಕ್ಷಿಸಿದ್ದಾರೆ. ಸಿದ್ದು ಜೊತೆ ಹಲವು ನಾಯಕರು ಪಂದ್ಯ ವೀಕ್ಷಿಸಿದ್ದಾರೆ.

ಇದೆ ವೇಳೆ ಕ್ರಿಕೆಟ್ ಅಭಿಮಾನಿಗಳಿಗೆ ಐಪಿಎಲ್ ಆಸಕ್ತಿಯೂ ಹೆಚ್ಚುತ್ತಿದೆ. ಚುನಾವಣಾ ಪ್ರಚಾರದ ಒತ್ತಡದಿಂದ ರಿಲ್ಯಾಕ್ಸ್ ಮೂಡ್ ಗೆ ಜಾರಿದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪ್ರಸಕ್ತ ಐಪಿಎಲ್ ನ ಬಹು ನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ವೀಕ್ಷಿಸಲು ಕ್ರೀಡಾಂಗಣದಲ್ಲಿ ಹಾಜರಿದ್ದರು.

ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ. ಎಂದು ಟ್ವೀಟ್ ಮಾಡಿದ್ದಾರೆ.


[ays_poll id=3]