This is the title of the web page
This is the title of the web page
Politics News

ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ ಸಿದ್ದರಾಮಯ್ಯ


K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡಿಸಲಿದ್ದಾರೆ. ಇದು ಅವರ ದಾಖಲೆಯ 14ನೇ ಬಜೆಟ್ ಮಂಡನೆ ಆಗಲಿದೆ.

ಹೌದು ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ. ಹುಟ್ಟು ಅವರು 13 ಬಾರಿ ಈಗಾಗಲೇ ಬಜೆಟ್ ಮಂಡನೆ ಮಾಡಿದ್ದು 14ನೇ ಬಾರಿ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಬಿಜೆಪಿ ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಆರೋಪ ಪ್ರತ್ಯಾರೋಪ ಸೇರಿ ಹಲವು ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು ಮಾಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುವ ಸಾಧ್ಯತೆ ಇದೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 8 ದಿನ ಪ್ರಶ್ನೋತ್ತರ ಕಲಾಪ ನಿಗದಿಯಾಗಿದೆ.


[ays_poll id=3]