This is the title of the web page
This is the title of the web page
Local News

ಸಿಂಧನೂರು, ಮಾನ್ವಿ ಮಾಜಿ ಶಾಸಕರಿಗೆ ಮಣೆ.. ದೇವದುರ್ಗ ಶ್ರೀದೇವಿ ನಾಯಕ್ ಅಭ್ಯರ್ಥಿ


ರಾಯಚೂರು : ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ 3 ಅಭ್ಯರ್ಥಿಗಳಿಗೆ ಕಾಂಗ್ರೆಸ್​​ ಟಿಕೆಟ್​​ ಘೋಷಣೆ ಮಾಡಿದೆ. ಸಿಂಧನೂರು ಕ್ಷೇತ್ರಕ್ಕೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಾನ್ವಿ ಕ್ಷೇತ್ರಕ್ಕೆ ಮಾಜಿ ಶಾಸಕ ಜಿ. ಹಂಪಯ್ಯ ನಾಯಕ ಹಾಗೂ ದೇವದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಶ್ರೀದೇವಿ ನಾಯಕ ಅವರಿಗೆ ಕಾಂಗ್ರೆಸ್​​​ ಮಣೆ ಹಾಕಿದೆ.

ಮಾನ್ವಿ ಕ್ಷೇತ್ರದ ಅಭ್ಯರ್ಥಿಗಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ. ನಾಯಕ ಮತ್ತು ಶರಣಪ್ಪ ಗುಡದಿನ್ನಿ ನಾಯಕ, ಜಿ.ಹಂಪಯ್ಯ ನಾಯಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ರ ಕಟ್ಟ ಬೆಂಬಲಿಗ ಎಂದು ಬಿಂಬಿಸಿಕೊಂಡಿರುವ ಜಿ.ಹಂಪಯ್ಯ ನಾಯಕರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಸಿಂಧನೂರು ಕ್ಷೇತ್ರಕ್ಕೆ ಹಂಪನಗೌಡ ಬಾದರ್ಲಿ ಹಾಗೂ ಬಸವನಗೌಡ ಬಾದರ್ಲಿ ಮಧ್ಯ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದರು. ಆದರೆ ಕಾಂಗ್ರೆಸ್ ರಾಜ್ಯ ಯುವ ಘಟಕದ ಮಾಜಿ ಅಧ್ಯಕ್ಷರಾಗಿರುವ ಬಸವನಗೌಡ ಬಾದರ್ಲಿ ಅವರಿಗೆ ಕಳೆದ ಬಾರಿ ಟಿಕೆಟ್ ನೀಡದೆ ಇದ್ದುದರಿಂದ ಈ ಬಾರಿ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲಾಗಿತ್ತು. ಆದರೆ ಹಂಪನಗೌಡ ಬಾದರ್ಲಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ದೇವದುರ್ಗ ಕ್ಷೇತ್ರಕ್ಕೆ ಮಾಜಿ ಸಂಸದ ಹಾಗೂ ಹಾಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ನಾಯಕ ಅವರಿಗೆ ಪಕ್ಷ ಟಿಕೆಟ್ ಫೈನಲ್ ಮಾಡಿತ್ತು. ಆದರೆ ಬಿ.ವಿ.ನಾಯಕರಿಗೆ ದೇವದುರ್ಗದಿಂದ ಸ್ಪರ್ಧೆ ಮಾಡಲು ಆಸಕ್ತಿ ಇರಲಿಲ್ಲ. ಹೀಗಾಗಿ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಸರತ್ತು ನಡೆಸಿದ್ದರು. ಇವರು ಸ್ಫರ್ಧಿಸದಿರುವ ಕಾರಣ ಇವರ ತಮ್ಮನ ಪತ್ನಿ ಶ್ರೀದೇವಿನಾಯಕ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಈ ಹಿಂದೆ ದೇವದುರ್ಗದಲ್ಲಿ ಉಪಚುನಾವಣೆ ನಡೆದಾಗ ಶ್ರೀದೇವಿನಾಯಕ ಅವರ ಪತಿ ರಾಜಶೇಖರ ನಾಯಕ ಪರಾಜಿತಗೊಂಡಿದ್ದರು.

ಈ ಹಿಂದೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದಾಗ ರಾಯಚೂರು ಗ್ರಾಮೀಣ, ಮಸ್ಕಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿ, ಐದು ಕ್ಷೇತ್ರಗಳನ್ನು ಬಾಕಿ ಉಳಿಸಿತ್ತು. ಇಂದು ಬಿಡುಗಡೆಯಾದ ಪಟ್ಟಿಯಲ್ಲಿ ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಬಹುದು ಎಂಬ ನಿರೀಕ್ಷೆಯಿತ್ತು. ಇದುವರೆಗೆ ಐದು ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಿದ್ದು, ರಾಯಚೂರು ನಗರ ಮತ್ತು ಲಿಂಗಸೂಗೂರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನೂ ಘೋಷಣೆ ಮಾಡದೇ ಇರುವುದು ಕುತೂಹಲ ಮೂಡಿಸದೆ.


[ays_poll id=3]