K2kannadanews.in
Local News ಮಸ್ಕಿ : ಸರಕಾರಿ ಶಾಲೆಯ ಮುಖ್ಯ ಶಿಕ್ಷಕನೊರ್ವ ಮದ್ಯಪಾನ ಮಾಡಿ, ಶಾಲೆಯ ಅಡುಗೆ ಕೋಣೆ ಮುಂದೆಯೇ ನಿದ್ದೆಗೆ ಜಾರಿದ ಘಟನೆ ಮಸ್ಕಿ ತಾಲ್ಲೂಕಿನ ಗೋನಾಳ ಗ್ರಾಮದ ಅಂಬಾದೇವಿ ನಗರದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನಲ್ಲಿ ಘಟನೆ ಜರುಗಿದ್ದು, ಶಿಕ್ಷಕನನನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ನಿಂಗಪ್ಪ ಎಂದು ಗುರುತಿಸಲಾಗಿದ್ದು, ಈ ಶಿಕ್ಷಕನು ಈ ಹಿಂದೆಯೂ ಕೂಡ ಅನೇಕ ಬಾರಿ ಮದ್ಯಪಾನ ಮಾಡಿ ಶಾಲೆಗೆ ಬಂದಿದ್ದನು ಎಂದು ತಿಳಿದು ಬಂದಿದೆ. ಶಾಲೆಯ ತರಗತಿ ವೇಳೆಯಲ್ಲಿ ಮುಖ್ಯ ಶಿಕ್ಷಕನ ಈ ನಡುವಳಿಕೆಗೆ ಪೋಷಕರು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕನನ್ನು ಅಮಾನತುಗೊಳಿಸಿ, ಕ್ರಮ ತೆಗೆದುಕೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.