This is the title of the web page
This is the title of the web page
Local News

ಮಹಿಳಾ ಸಬಲೀಕರಣದಿಂದ ಸಮಾಜ ಅಭಿವೃದ್ಧಿ


ರಾಯಚೂರು : ಮಹಿಳೆಯರು ಒಂದೇ ಕ್ಷೇತ್ರಕ್ಕೆ ಸೀಮಿತಗೊಳ್ಳದೇ ಎಲ್ಲ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.

ಅಂತರಾಷ್ಟ್ರಿಯ ಮಹಿಳಾದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಶಾಸಕರು ಮಹಿಳೆಯರು ಆಚರಣೆ ಸೀಮಿತವಾಗಬಾರದು. ಮಹಿಳಾ ಸಬಲೀಕರಣದಿಂದ ಮಾತ್ರ ಅಭಿವೃದ್ದಿ, ಸಮಾಜದ ಏಳಿಗೆ ಸಾಧ್ಯವಾಗಲಿದೆ. ಹೀಗಾಗಿ ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ. ಕುಟುಂಬದಲ್ಲಿ ಹಲವಾರು ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗೆ ತಾರತಮ್ಯ ಮಾಡಬಾರದು. ಎಲ್ಲ ರಂಗದಲ್ಲಿಯೂ ಮಹಿಳೆಯರು ದಿಟ್ಟತನದಿಂದ ತೊಡಗಿಕೊಂಡಿರುವುದನ್ನು ಇಂದು ಕಾಣಬಹುದಾಗಿದೆ. ಮಹಿಳೆಯರಿಗೆ ಹೆಚ್ಚು ಅವಕಾಶಗಳು ನೀಡಬೇಕು. ಮಹಿಳೆಯರು ಸಬಲರಾದರೆ ಸಮಾಜದ ಪ್ರಗತಿಯು ಆಗಲಿದೆ. ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕಿದೆ ಎಂದರು.

ಸ್ಥಳೀಯ ಆಡಳಿತ ಮತ್ತು ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಲಾಗುತ್ತಿದೆ ಎಂದರು.
ಪ್ರಸ್ತುತ ಸಮಾಜದಲ್ಲಿ ಶಿಕ್ಷಣ ಮಹತ್ವದ್ದು, ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಒತ್ತು ಕೊಡಬೇಕು ಎಂದರು. ಕುಟುಂಬ ಪೋಷಣೆ ಜೊತೆಗೆ ಸಮಾಜ ಸೇವೆಯಲ್ಲಿ ಮಹಿಳೆಯರ ಪಾತ್ರ ಶ್ರೇಷ್ಠವಾದದ್ದು,ಮಹಿಳೆಯರ ಶಕ್ತಿ ದೇಶ ಶಕ್ತಿ ಎಂದರು. ಇಂತಹ ಕಾರ್ಯಕ್ರಮಗಳ ಮಹಿಳೆಯರು ಸದುಪಯೋಗ ಪಡೆದುಕೊಳ್ಳಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.


[ays_poll id=3]