ವೈಕುಂಠ ಏಕಾದಶಿ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು
![]() |
![]() |
![]() |
![]() |
![]() |
ರಾಯಚೂರು : ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ಮಂತ್ರಾಲಯ ಹಳೆಪೇಟೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇರುವಂತಹ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಶ್ರೀಮಠದ ಪೀಠಾಧಿಪತಿಗಳು.
ರಾಯರ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಶಿಷ್ಟ ರೀತಿಯಲ್ಲಿ ಅಲಂಕೃತ ಗೊಂಡಿರುವ ದೇವಸ್ಥಾನದಲ್ಲಿ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು. ತದನಂತರ ವೈಕುಂಠ ದ್ವಾರವನ್ನು ಲೋಕಾರ್ಪಣೆ ಮಾಡಿ ಎಲ್ಲರಿಗೂ ಅನುಗ್ರಹ ಸಂದೇಶ ನೀಡಿ ಆಶೀರ್ವದಿಸಿದರು. ವಿಶೇಷ ಪೂಜಾ ಕಾರ್ಯಕ್ರಮದ ನಂತರ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ವೈಕುಂಠ ದ್ವಾರದ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ವೆಂಕಟೇಶ್ವರನ ಕೃಪೆಗೆ ಪಾತ್ರರಾದರು.
![]() |
![]() |
![]() |
![]() |
![]() |