
K2 ನ್ಯೂಸ್ ಡೆಸ್ಕ್: ಮಾರ್ಚ್ 9ರಿಂದ ಏಪ್ರಿಲ್ 15ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದರು.
ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತದೆ. ಸಿಸಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗುತ್ತದೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳುವುದು ಸೇರಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಶಂಕಿತ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಅಂಕಿ-ಅಂಶಗಳು
-ದ್ವಿತೀಯ ಪಿಯುಸಿ
– ಒಟ್ಟು ಪರೀಕ್ಷಾ ಕೇಂದ್ರಗಳು: 1,109
– ಒಟ್ಟು ವಿದ್ಯಾರ್ಥಿಗಳು: 7,27,387
ಎಸ್‌ಎಸ್‌ಎಲ್‌ಸಿ
– ಒಟ್ಟು ಪರೀಕ್ಷಾ ಕೇಂದ್ರಗಳು : 3,307
-ಒಟ್ಟು ವಿದ್ಯಾರ್ಥಿಗಳು- 8,69,490
![]() |
![]() |
![]() |
![]() |
![]() |
[ays_poll id=3]