![]() |
![]() |
![]() |
![]() |
![]() |
K2 ನ್ಯೂಸ್ ಡೆಸ್ಕ್ : ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು. ಆದರೆ ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಎಸ್‌ಎಸ್‌ಎಲ್’ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಈಗಾಗಲೇ ಮೌಲ್ಯಮಾಪನದ ನಂತರದ ಕಾರ್ಯ ಪ್ರಗತಿಯಲ್ಲಿದೆ ಎಂದು ಕೆಎಸ್ಇಎಬಿ ಯ ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಶಾಲೆಗಳನ್ನು ಮತಗಟ್ಟೆಗಳಾಗಿ ಗುರುತಿಸಿರುವುದರಿಂದ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆಡಳಿತ ಮಂಡಳಿ ಕಾಯಬೇಕಾಗಿದೆ. ಹೀಗಾಗಿ ಫಲಿತಾಂಶ ಸಿದ್ಧವಾಗಿದ್ದರೂ ಮತದಾನ ಪೂರ್ಣಗೊಳ್ಳುವವರೆಗೆ ಕಾಯಬೇಕಿದೆ. ಈ ನಡುವೆ ಚುನಾವಣೆ ಪೂರ್ಣಗೊಂಡ ಬಳಿಕ ಮೇ.11 ಅಥವಾ 12 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
![]() |
![]() |
![]() |
![]() |
![]() |
[ays_poll id=3]