This is the title of the web page
This is the title of the web page
Education News

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ‌ : ನೀವು ನೋಡುವುದು ಹೇಗೆ..?


K2kannadanews.in

SSLC Results 2024 : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶ ಇಂದು ಪ್ರಕಟವಾಗಲಿದೆ. ಮೇ 9ರ ಬೆಳಗ್ಗೆ 10.30ಕ್ಕೆ ಫಲಿತಾಂಶ (Result) ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ karresults.nic.in ಮತ್ತು kseab.karnataka.gov.in ವೆಬ್‌ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.‌ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದರು.


[ays_poll id=3]