
ದೇವದುರ್ಗ : ಪಟ್ಟಣದ ವಿದ್ಯಾಗಿರಿ ಪ್ರದೇಶದಲ್ಲಿನ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಜರುಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಹೊರವಲಯದಲ್ಲಿ ಇರುವ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಬಿ.ಆರ್ ಗುಂಡಾ ಗ್ರಾಮದ 15ವರ್ಷದ ವಿದ್ಯಾರ್ಥಿನಿ ಪವಿತ್ರಾ ಮೃತ ದುರ್ದೈವಿ. 10ನೇ ತರಗತಿ ಬಾಲಕಿ ಸಾವಿಗೆ ಯುವತಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಮೃತಪಟ್ಟಿದಾಳೆ ಎಂದು ಹೇಳಲಾಗುತ್ತಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಡಿಎಸ್ಪಿ ಮಂಜುನಾಥ, ಜಿಲ್ಲಾ ಪರಿಶಿಷ್ಟ ಪಂಗಡ ಅಧಿಕಾರಿ ರಾಜೇಂದ್ರ ಜಲ್ದರ್, ಸಿಪಿಐ ಗುಂಡೂರಾವ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]