This is the title of the web page
This is the title of the web page
Politics News

ಕೇಂದ್ರದಿಂದ ಬರುವ ಅಕ್ಕಿ ಕಡಿತ ಮಾಡಿರುವ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ


K2 ಪೊಲಿಟಿಕಲ್ ನ್ಯೂಸ್ : ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕೊಡುವ ಉಚಿತ ಅಕ್ಕಿಯನ್ನೂ ಈ ತಿಂಗಳು ರಾಜ್ಯ ಸರ್ಕಾರ ಎರಡು ಕೆಜಿ ಕಡಿಮೆ ಮಾಡಿದೆ. ಚುನಾವಣೆ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಈಗ ಮೂರು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರದ ಬಗ್ಗೆ ನಾನು ಈಗಾಗಲೇ ಮಾತನಾಡಿದ್ದೆ, ಕುಮಾರಸ್ವಾಮಿಯವರು ವರ್ಗಾವಣೆಗೆ ಒಂದು ಇಲಾಖೆಯ ದರ ಪಟ್ಡಿ ಬಿಡಿಗಡೆ ಮಾಡಿದ್ದಾರೆ. ಅವರು ಬಿಡುಗಡೆ ಮಾಡಿರುವುದು ಸರಿ ಇದಿಯಾ ಅಥವಾ ಇನ್ನೂ ಜಾಸ್ತಿ ಇದಿಯಾ ? ಸರ್ಕಾರ ಈ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.


[ays_poll id=3]