
ರಾಯಚೂರು: ನಗರದ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಶವ ಬಿದ್ದಿರುವ ಸ್ಥಿತಿ ನೋಡಿದರೆ ಕೊಲೆ ಮಾಡಿ ಎಸೆದಿರಬಹುದು ಎಂದು ಅಲ್ಲಿ ನೆರದಿದ್ದ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಹನುಮಂತ23 ವರ್ಷ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಹಾಸ್ಟೆಲ್‌ನಿಂದ ಬ್ಯಾಗ್ ಸಮೇತ ಹೊರ ನಡೆದಿದ್ದ ಹನುಮಂತ ಮಂಗಳವಾರ ಬೆಳಗ್ಗೆ ರೈಲ್ವೆ ಟ್ರ್ಯಾಕ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮಾನ್ವಿ ತಾಲೂಕಿನ ಬೈಲ್ಮರ್ಚೆಡ್ ನಿವಾಸಿಯಾಗಿರುವ ಹನುಮಂತ, ನಗರದ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದ. ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಬಿಎಡ್ ವ್ಯಾಸಂಗ ಮಾಡುತ್ತಿದ್ದ. ರಿಮ್ಸ್ ಆಸ್ಪತ್ರೆಯಲ್ಲಿ ಮೃತ ಯುವಕನ ಮರಣೋತ್ತರ ಪರೀಕ್ಷೆ ನಡೆದಿದ್ದು, ಆಸ್ಪತ್ರೆ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
![]() |
![]() |
![]() |
![]() |
[ays_poll id=3]