
ಲಿಂಗಸುಗೂರು : ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟ ಹಿನ್ನೆಲೆಯಲ್ಲಿ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪಾಲಕರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೌದು ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಇರುವಂತಹ ವಿ ಸಿ ಬಿ ಕಾಲೇಜು ಮಹಿಳಾ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಕೊಠಡಿಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಪಿಯುಸಿ ಓದುತ್ತಿದ್ದ 17 ವರ್ಷದ ಐಶ್ವರ್ಯ ಮೃತಪಟ್ಟ ದುರ್ದೈವಿ. ಕಾಲೇಜು ಪ್ರಾಂಶುಪಾಲರಾದ ರಮೇಶ್ ಅವರು ವಿದ್ಯಾರ್ಥಿನಿಗೆ ತಮ್ಮ ಕೊಠಡಿಗೆ ಬರುವಂತೆ ಪೀಡಿಸುತ್ತಿದ್ದರು ಮತ್ತು ಪ್ರತಿನಿತ್ಯ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿತ್ತು.
ಆದರೆ ಇತ್ತ ಐಶ್ವರ್ಯ ಪಾಲಕರು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಐಶ್ವರ್ಯಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಜೊತೆಗೆ ಅನುಮಾನ ಬಾರದಂತೆ ವಸತಿ ನಿಲಯದಲ್ಲಿ ತಂದು ಹಾಕಿಯಾ ವಸ್ತ್ರಗಳಿಂದ ನೇಣು ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]