
ರಾಯಚೂರು : ರಾಮ ಮಂದಿರ ಬಳಿ ಇರುವ ರಸ್ತೆ ವಿಭಜಕದ ಯೂಟರ್ನ್ ಬಳಿ ದ್ವಿಚಕ್ರ ವಾಹನ ತಿರುಗಿಸುತ್ತಿದ್ದ ವೇಳೆ, ರಭಸವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು, ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜು.18ರಂದು ನಗರದ ರಾಘವೇಂದ್ರ ಪೆಟ್ರೋಲ್ ಬಂಕ್ ಹತ್ತಿರದ ಕೆಟಿಬಿ ಜುವೆಲರ್ಸ್ ಮುಂಭಾಗದಲ್ಲಿ ಜರುಗಿದೆ. ರೈಲು ನಿಲ್ದಾಣದ ಕಡೆಯಿಂದ ವೇಗವಾಗಿ ಬಂದ ಕಾರು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಈ ಘಟನೆ ಜರುಗಿದೆ.
ಮೊದಲು ಬೈಕಿಗೆ ಡಿಕ್ಕಿ ಹೊಡೆದ ಕಾರು ತದನಂತರ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿನಿಯರು ಗಾಳಿಯಲ್ಲಿ ಹಾರಿದ್ದಾರೆ. ಈ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅಪಘಾತದಲ್ಲಿ ಬೈಕ್ ಚಾಲಕನಿಗೆ ಕೈ ಮತ್ತು ಕಾಲು ಮುರಿದಿದ್ದು, ಒವ೯ ವಿದ್ಯಾರ್ಥಿನಿಗೆ ಕೈ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಗೆ ಹಲ್ಲು ಮುರಿದಿದೆ ಎಂದು ತಿಳಿದುಬಂದಿದೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
![]() |
![]() |
![]() |
![]() |
[ays_poll id=3]