
K2 ಪೊಲಿಟಿಕಲ್ ನ್ಯೂಸ್ : ಮಂಡ್ಯ ಜಿಲ್ಲೆಯ ಸಂಸದೆ ಸುಮಲತಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಊಹಾಪೋಹ ಒಂದು ವರ್ಷದಿಂದ ಹರಿದಾಡುತ್ತಿದೆ. ಇದೀಗ ಮೋದಿಯವರು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿದ್ದು, ಮೋದಿ ಸಮ್ಮುಖದಲ್ಲಿ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಮಾ.11ರಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ವೇಳೆ ಮಂಡ್ಯದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಸಂಸದೆ ಸುಮಲತಾ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿಬರುತ್ತಿವೆ. ಮೋದಿ ಸಮ್ಮುಖದಲ್ಲೇ ಬಿಜೆಪಿ ಸೇರಬೇಕು ಎನ್ನುವುದು ಸುಮಲತಾ ಅವರ ಆಸೆಯಾಗಿದೆ. ಅದರಂತೆ ಮಾ.11ರಂದು ಮೋದಿ ನೇತೃತ್ವದಲ್ಲಿ ಕೇಸರಿ ಪಾಳಯ ಸೇರಿಕೊಳ್ಳಬಹುದು ಎಂದು ಕ್ಷೇತ್ರದ ಅತ್ಯಂತ ಮತ್ತು ಪಕ್ಷದಲ್ಲಿ ಭಾರಿ ಚರ್ಚೆ ನಡೆದಿದೆ.
![]() |
![]() |
![]() |
![]() |
![]() |
[ays_poll id=3]