
ಲಿಂಗಸುಗೂರು : ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವರದಾನೇಶ್ವರ ಸ್ವಾಮಿಜಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಲಿಂಗಸುಗೂರು ತಾಲೂಕಿನ ಚಿಕ್ಕ ಹೆಸರೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸರ್ಕಾರಿ ಭೂಮಿ ಸಾಗುವಳಿದಾರರಿಗೆ ಪಟ್ಟ ವಿತರಣೆ ಹಾಗೂ ಕಾಲ್ನಡಿಗೆ ಜಾಥಕ್ಕೆ ಚಾಲನೆ ನೀಡಿದ ಅವರು ಅಕ್ರಮ ಮಧ್ಯಮಾರಾಟದ ಹಿಂದೆ ದೊಡ್ಡ ಜಾಲವೆ ಇದೆ. ಪೊಲೀಸ್ ಇಲಾಖೆ ಅಕ್ರಮ ಮದ್ಯ ಮಾರಾಟ ನಡೆಯುವ ಬಗ್ಗೆ ತಿಳಿದಿದ್ದರು ಕ್ರಮ ಕೈಗೊಳ್ಳದಿರುವುದು ಸೋಜಿಗದ ಸಂಗತಿಯಾಗಿದೆ ಎಂದು ಅಸಮಾಧಾನ ಹೊರ ಹಾಕಿದರು.
ಈ ವೇಳೆ ಕನಕ ಗುರು ಪೀಠದ ಸಿದ್ದರಾಮಾನಂದ ಪುರಿ ಸ್ವಾಮಿಗಳು ಈ ಒಂದು ಕಾಲ್ಡಿಗೆ ಜಾಥದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಶ್ರೀಗಳು ರೈತಾಪಿ ವರ್ಗ ಸಾಕಷ್ಟು ಸಂಕಷ್ಟದಲ್ಲಿ ಇದ್ದಾರೆ ಹಣದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವಂತಹ ರೈತರಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಭೂಮಿ ಪಟ್ಟ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಜಾಥ ಮೂಲಕ ಮನವಿ ಮಾಡಿಕೊಂಡರು.
![]() |
![]() |
![]() |
![]() |
![]() |
[ays_poll id=3]