![]() |
![]() |
![]() |
![]() |
![]() |
ರಾಯಚೂರು : ಮುಂಬರುವ ವಿಧಾನಸಭಾ ಚುನಾವಣೆಗೆ ರಾಯಚೂರು ನಗರ ಕ್ಷೇತ್ರದಿಂದ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಸೈಯದ್ ಇಸಾಕ್ ಹುಸೇನ್ ಖಾಲಿದ್ ಅವರು ಸ್ಪರ್ಧಿಸಲಿದ್ದು,ನಗರ ಜನರು ಬೆಂಬಲಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚರ್ ಮನವಿ ಮಾಡಿದರು.
2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ 52 ಕ್ಷೇತ್ರಗಳಲ್ಲಿ ಎಸ್ ಡಿಪಿಸಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.ಈಗಾಗಲೇ 19 ಜನ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸ್ವತಂತ್ರ ಭಾರತದಲ್ಲಿ ಹಲವು ಚುನಾವಣೆಗಳು ಬಂದು ಹೋಗಿವೆ, ನಾವು ಮತ ಕೊಟ್ಟು ಗೆಲ್ಲಿಸಿದ ವಿವಿಧ ಪಕ್ಷಗಳ ಶಾಸಕರು ಗೆದ್ದು ಬಂದಿದ್ದಾರೆ. ಕಾಂಗ್ರೆಸ್,ಬಿಜೆಪಿ,ಜೆ.ಡಿ.ಎಸ್ ಪಕ್ಷಗಳ ಸರ್ಕಾರಗಳು ಬಂದು ಹೋಗಿವೆ.ಅದರೆ, ಜನರ ಸಮಸ್ಯೆಗಳು ಮಾತ್ರ ಇನ್ನೂ ಹಾಗೆಯೇ ಜೀವಂತವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಕೇವಲ ಕೋಮುವಾದದ ವಿಷದ ಮೇಲೆ ಚುನಾವಣೆ ಗೆದ್ದಿದೆ. ಅಭಿವೃದ್ಧಿ ಎಂಬುದು ಭೂತಗನ್ನಡಿ ಹಿಡಿದು ಹುಡುಕಿದರೂ ಕಾಣಲು ಸಿಗುವುದಿಲ್ಲ. 40% ಭ್ರಷ್ಟಾಚಾರದಿಂದ ರಾಜ್ಯದ ಖಜಾನೆಯನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪಿಸಿದರು.
ಸರಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿ ವಿರೋಧ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳ ಈ ಸ್ಥಿತಿಯಿಂದ ಇಲ್ಲಿನ ಜನ ಬೇಸತ್ತಿದ್ದಾರೆ. ಆದ್ದರಿಂದ ಈ ಬಾರಿ ಜನರು ಬದಲಾವಣೆಗೆ ಕಾಯುತ್ತಿದ್ದಾರೆ ಎಂದರು.
![]() |
![]() |
![]() |
![]() |
![]() |
[ays_poll id=3]