ರಾಯಚೂರು : ರಾಯಚೂರು ಜಿಲ್ಲೆ ಅತ್ಯಂತ ಹಿಂದುಳಿದ ಜಿಲ್ಲೆ ಇಲ್ಲಿನ ವಿದ್ಯಾರ್ಥಿಗಳು ವೃತ್ತಿ ಮಾರ್ಗದರ್ಶನ ಜೊತೆಗೆ ವಿದ್ಯಾರ್ಥಿಗಳು ಪರಿಶ್ರಮದ ಹಾದಿಯಲ್ಲಿ ಸಾಗಿದರೆ ಮಾತ್ರ ಸ್ಪರ್ಧಾತ್ಮಕ ಯಶಸ್ಸು ಗಳಿಸಲು...
ರಾಯಚೂರು : ಜಿಲ್ಲಾಡಳಿತದಿಂದ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಡಿ.26ರಂದು ಬೆಳಗ್ಗೆ 11ಕ್ಕೆ ನಗರದ ಟ್ಯಾಗೋರ್ ಕಾಲೇಜು ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ್ ಅವರು ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಹಾಗೂ ಸರಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ವಿಶ್ವ ಮಾನವ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ಗ್ರಾ. ಪಂ ತಾಲೂಕು ಮಟ್ಟದಲ್ಲಿ ಸದರಿ ಜಯಂತ್ಯುತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು. ಜಯಂತಿ ಆಚರಣೆಗೆ ಮೂಲಭೂತ ಸೌಕರ್ಯಗಳು ಕೊರತೆಯಾಗದಂತೆ ಕ್ರಮವಹಿಸಬೇಕು ಎಂದರು. ವಿಶ್ವ ಮಾನವ ಕುವೆಂಪು ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ಕಾರ್ಯಕ್ರಮ ಇರುತ್ತದೆ. ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಕುವೆಂಪು ಭಾವಗೀತೆ, ಕವನ, ಹಾಡುಗಳನ್ನು ಹಾಡುವುದರ ಮೂಲಕ ಇಂದಿನ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಕುವೆಂಪು ಅವರ...