K2 ನ್ಯೂಸ್ ಡೆಸ್ಕ್: ರಿಷಬ್ ಪಂತ್ ದೆಹಲಿಯಿಂದ ರೂರ್ಕಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಭೀಕರವಾಗಿ ಕಾರು ಅಪಘಾತಕ್ಕೆ ಒಳಗಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಬಸ್ಮವಾದ ಘಟನೆ ಜರುಗಿದೆ....
ಸಿಂಧನೂರು : ತಾಲೂಕಿನ 4 ಮೈಲಿ ಕ್ಯಾಂಪ್ ಬಳಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಭೀಕರ ಘಟನೆಯಲ್ಲಿ ನಾಲ್ಕು ಜನ ಗಾಳಿಯಲ್ಲಿ ಹಾರಿದ ಭೀಕರ ದೃಶ್ಯ ಸರಿಯಾಗಿದೆ. ಹೌದು ರಸ್ತೆ ಬದಿಯಲ್ಲಿ ಮೂರು ಮಕ್ಕಳೊಂದಿಗೆ ನಿಂತಿದ್ದ ಹನುಮಂತ ಎಂಬುವ ವ್ಯಕ್ತಿಯ ದ್ವಿಚಕ್ರ ವಾಹನ ಸವಾರನಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರೊಂದು ರಭಸವಾಗಿ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಮೂರು ಮಕ್ಕಳು, ವ್ಯಕ್ತಿ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಅಪಘಾತದ ಭೀಕರತೆಗೆ ಮಕ್ಕಳು ಸೇರಿ ಹನುಮಂತ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. https://youtu.be/xqfSYciTbjY ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡಲೇ 108 ಆಂಬುಲೆನ್ಸ್ ಗೆ ಕರೆ ಮಾಡುವ ಮೂಲಕ ಗಂಭೀರವಾಗಿ ಗಾಯಗೊಂಡುವರನ್ನು ತಕ್ಷಣಕ್ಕೆ ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದ್ದು ಘಟನೆ ನೋಡಿದರೆ ಮೈ ಜುಮ್...
ರಾಯಚೂರು : ಗುಡದೂರು ನಾಲೆ ಬಳಿ ಬೈಕ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ನಾಲೆ ಬಳಿ ಘಟನೆ ಸಂಭವಿಸಿದೆ. ಮೃತ ಮೂವರು ವ್ಯಕ್ತಿಗಳನ್ನು ಆಂಧ್ರ ಮೂಲದ ನಂದ್ಯಾಲ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು ಎನ್ನಲಾಗಿದೆ. ಮಸ್ಕಿ ಪಟ್ಟಣದಲ್ಲಿ ಊಟ ಮುಗಿಸಿಕೊಂಡು ನಾಲ್ಕು ಜನ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ನಿನ್ನೆ ರಾತ್ರಿ ಊಟಕ್ಕೆಂದು ಮಸ್ಕಿ ಪಟ್ಟಣಕ್ಕೆ ಬಂದಿದ್ದಾರೆ. ವಾಪಸ್ ಆಗುತ್ತಿದ್ದ ವೇಳೆ ಬೈಕ್ ದಾರುಣ ಘಟನೆ ಸಂಭವಿಸಿದೆ ಎಂದು...
ರಾಯಚೂರು : ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಘಟನೆ ಸಂಭವಿಸಿದೆ. ಮೃತರನ್ನು ಶರತ್, ಪ್ರವೀಣ್ ಎಂದು ಗುರುತಿಸಲಾಗಿದೆ. ರಾಯಚೂರು ನಗರದ ಮಡ್ಡಿಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಯರಗೇರಾದಿಂದ ಬೈಕ್ ಸವಾರರು ರಾಯಚೂರು ಕಡೆ ಬರುವಾಗ, ರಾಯಚೂರಿನಿಂದ ಮಂತ್ರಾಲಯಕ್ಕೆ ಹೋಗುವಾಗ ಮಾರ್ಗಮಧ್ಯ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ತನಿಖೆ ಮುಂದುವರೆಸಿದ್ದಾರೆ....