K2 ನ್ಯೂಸ್ ಡೆಸ್ಕ್ : ಪೀಠಗಳ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಗದ್ಗುರುಗಳು ಸಣ್ಣ ವಯಸ್ಸಿನವರಾದರೂ, ದೊಡ್ಡ ಸಾಧನೆ...
ರಾಯಚೂರು : ಕಲ್ಯಾಣ ಕರ್ನಾಟಕ ಭಾಗಕ್ಕೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಉದ್ಯೋಗ ಸೇರಿದಂತೆ ಸರ್ವಾಗಿಣ ಅಭಿವೃದ್ಧಿಗಾಗಿ 371ಜೆ ವಿಷೇಶ ಸ್ಥಾನ ಮಾನ ಸಿಕ್ಕಿರುವುದು ಮಲ್ಲಿಕಾರ್ಜುನ್ ಖರ್ಗೇ ನಾಯಕತ್ವದ ಹೋರಾಟಕ್ಕೆ ಸಿಕ್ಕ ಫಲ ಎಂದು ಎಐಸಿಸಿ ಕಾರ್ಯದರ್ಶಿ ಎನ್ ಎಸ್ ಬೋಸರಾಜು ತಿಳಿಸಿದರು ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನವೆಂಬರ್ 10ರಂದು ನಡೆಯುವ ಮಲ್ಲಿಕಾರ್ಜುನ್ ಖರ್ಗೆ ಅವರ ಅಭಿನಂದನಾ ಸಮಾರಂಭ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 7 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಸಲ್ಲಿಸಿದ ಅವರ ಸಾಮಾಜಿಕ ಸೇವೆ ಅಗಣಿತವಾಗಿದೆ. ಬಿಜೆಪಿ ನೇತೃತ್ವದ ವಾಜಪೇಯಿ ಸರ್ಕಾರದ ಅವಧಿಯಲ್ಲಿ 371ಜೆ ಅನುಮೋದಿಸಲು ಸಾದ್ಯವಿಲ್ಲ ಎಂದಿದ್ದನ್ನು ಮಲ್ಲಿಕಾರ್ಜುನ್ ಖರ್ಗೆ ಅವರು ಅನುಮೋದಿಸಿ ಈ ಭಾಗದ ಸರ್ವಾಂಗಿಣ ಅಭಿವೃದ್ಧಿಗೆ ನಾಂದಿಯಾಡಿದ್ದಾರೆ ಹಾಗಾಗಿ ನಾವೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಅವರಿಗೆ ಅಭಿನಂದಿಸಬೇಕೆಂದು ತಿಳಿಸಿದರು. ನಂತರ ಬಿ.ವಿ ನಾಯಕ್...
ರಾಯಚೂರು : ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ೦7 ತಾಲೂಕುಗಳಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗಿದ್ದು, ಯಾವುದೇ ಯೋಜನೆಯನ್ನು ಅನುಷ್ಟಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದೆ ಎಂದರು. ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ...