This is the title of the web page
This is the title of the web page

archiveಅಭಿವೃದ್ಧಿ

State News

ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರಕಾರ ಬದ್ಧ: ಮುಖ್ಯಮಂತ್ರಿ

K2 ನ್ಯೂಸ್ ಡೆಸ್ಕ್ : ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು. ಸುಮಾರು 2739 ಕೋಟಿ ರೂ.ಗಳ ಅನುದಾನವನ್ನುಂಕಳೆದ ಮೂರೂವರೆ ವರ್ಷಗಳಲ್ಲಿ ತಂದು ವಿವಿಧ ಇಲಾಖೆಗಳ ಅಭಿವೃದ್ಧಿ ಮಾಡಿ, ನೀರಾವರಿ, ಮೂಲಭೂತ ಸೌಕರ್ಯ, ವಿದ್ಯುತ್, ಶಿಕ್ಷಣ, ಆಸ್ಪತ್ರೆ, ಬ್ಯಾರೇಜ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆಗಳನ್ನು ಈ ಕ್ಷೇತ್ರ ಕ್ಕೆ ತಂದು ಜಲಜೀವನ್ ಮಿಷನ್ ಅಡಿ ಪ್ರರಿ ಮನೆಗೆ ಗಂಗೆಯನ್ನು ಹೊರಿಸಲಾಗಿದೆ. ಸರಕಾರ ಜನಪ್ರಿಯವಾದರೆ ಸಾಲದು, ಜನಪರ ಸರಕಾರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ ಎಂದರು. ಗಡಿಭಾಗದ ಜಿಲ್ಲೆಗಳ1800 ಗ್ರಾಮ...
Local News

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಶು ಅಭಿವೃದ್ಧಿ ಯೋಜನೆ ಜಾರಿ

ರಾಯಚೂರು : ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ೦7 ತಾಲೂಕುಗಳಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗಿದ್ದು, ಯಾವುದೇ ಯೋಜನೆಯನ್ನು ಅನುಷ್ಟಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದೆ ಎಂದರು. ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ...
1 2
Page 2 of 2