This is the title of the web page
This is the title of the web page

archiveಕಾಂಗ್ರೆಸ್

Local News

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ

ರಾಯಚೂರು : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಧರ್ಮಗುರುಗಳ ಸಮಿತಿಯ ಜಿಲ್ಲಾಧ್ಯಕ್ಷ ಅಸಿಮುದ್ದಿನ್ ಅಕ್ತರ್ ಆಗ್ರಹಿಸಿದರು. ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 60ಸಾವಿರ ಮುಸ್ಲಿಂ ಮತದಾರರಿದ್ದು, ಸಾಮಾಜಿಕವಾಗಿ ಇತರೆ ಸಮುದಾಯದ ಮತಗಳನ್ನು ಪಡೆದ ಒಬ್ಬ ಮುಸ್ಲಿಂ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಕಳೆದ 20 ವರ್ಷಗಳಿಂದ ಮುಸ್ಲಿಂ ಸಮುದಾಯ ರಾಯಚೂರು ನಗರ ಹೊರತುಪಡಿಸಿ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಕೇಳದೆ ಪಕ್ಷಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದೆ. ನಗರದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಆಕಾಂಷಿ ಗಳ ಜೊತೆಗೆ ಸಭೆ ನಡೆಸಿದ್ದು, ಅವರೆಲ್ಲ ಒಂದಾಗಿ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ. ಅರ್ಜಿ ಸಲ್ಲಿಸಿದ 12 ಜನರಲ್ಲಿ ಯಾರಾದರೂ ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಲ್ಲಿ ಉಳಿದೆಲ್ಲರೂ ಬೆಂಬಲಿಸುತ್ತೇವೆ ಎಂದಿದ್ದಾರೆ. ನಗರಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ...
Politics News

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು..AICC ಅಧ್ಯಕ್ಷರು ಹೇಳಿದ್ದೇನು….

K2 ಪೊಲಿಟಿಕಲ್ ನ್ಯೂಸ್ : ನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಯಾರೇ ಮುಖ್ಯಮಂತ್ರಿ, ಸಚಿವರಾದರೂ ಅವರಿಗೆ ನನ್ನ ಬೆಂಬಲವಿರುತ್ತದೆ. ಮುಖ್ಯಮಂತ್ರಿ, ಸಚಿವ ಸ್ಥಾನಕ್ಕೆ ಅವರು ಬೇಡ, ಇವರು ಬೇಡ ಎಂದು ಹೇಳುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿರುತ್ತದೆ ಎಂದು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವೇ ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ. ನಾವೆಲ್ಲರೂ ಒಂದಾದರೆ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಆಗಲಿ ಎಂದು ಖರ್ಗೆ ಹೇಳಿದ್ದಾರೆ. ನಾವೆಲ್ಲರೂ ಒಂದಾದರೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗೆಲುವು ಸಾಧಿಸುತ್ತೇವೆ. ಒಂದಾಗಿ ಕೆಲಸ ಮಾಡದಿದ್ದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ...
Politics News

2023 ಚುನಾವಣೆ : ಕಾಂಗ್ರೆಸ್ ಲಿಸ್ಟ್ ಫೈನಲ್, ಹೀಗಿದೆ ಕ್ಷೇತ್ರವಾರು ಅಭ್ಯರ್ಥಿಗಳ ಲಿಸ್ಟ್

K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ಹಿಮಾಚಲ್ ಪ್ರದೇಶ ಚುನಾವಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ರಂಗೇರಿದೆ. ಯಾವ ಕ್ಷಣದಲ್ಲಾದರೂ ಚುನಾವಣೆ ಎದುರಾಗಬಹುದು ಎಂದು ಮೂರು ಪಕ್ಷಗಳು ಪ್ರಚಾರ ಮಾಡುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಸಂಭಾವ್ಯ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೊರತುಪಡಿಸಿದರೆ ಉಳಿದ ಎಲ್ಲರಿಗೂ ಟಿಕೆಟ್ ಫಿಕ್ಸ್ ಆದಂತಾಗಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಂದಲೂ ಆಕಾಂಕ್ಷೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿಗಳ ಮೇಲೆ ಇದೀಗ ಕಾಂಗ್ರೆಸ್ ಸಂಭಾವ್ಯ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ ಯಾವ ಕ್ಷೇತ್ರದಿಂದ ಯಾರು ಸಂಭಾವ್ಯ ಅಭ್ಯರ್ಥಿ ಎಂದು ನೋಡೋಣ. ಬೆಂಗಳೂರು ನಗರ ಕ್ಷೇತ್ರ ಟಿಕೆಟ್..? ಗಾಂಧಿನಗರ- ದಿನೇಶ್ ಗುಂಡೂರಾವ್ ಬ್ಯಾಟರಾಯನಪುರ- ಕೃಷ್ಣಬೈರೇಗೌಡ ಸರ್ವಜ್ಙನಗರ- ಕೆ.ಜೆ.ಜಾರ್ಜ್ ಬಿಟಿಎಂ...
Politics News

ಕಾಂಗ್ರೆಸ್ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ : ಸಿಎಂ

K2 ಪೊಲಿಟಿಕಲ್ ನ್ಯೂಸ್ : ಭಾಜಪದ ಜನಸಂಕಲ್ಪ ಯಾತ್ರೆಗೆ ಜನಬೆಂಬಲ ದೊರೆತಿದ್ದು, ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಈ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿ ತನ್ನ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಳೆದ ಹಲವಾರು ಸಂದರ್ಭಗಳಲ್ಲಿ ಆಯ್ಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಂದಾಗಿ ರಾಜ್ಯ ಹಿಂದುಳಿದಿದೆ. ಚುನಾವಣೆ ಸಂದರ್ಭದಲ್ಲಿ ಹಲವಾರು ಭರವಸೆಗಳನ್ನು ನೀಡಿ ಜನರನ್ನು ಕತ್ತಲಲ್ಲಿ ಇಟ್ಟು ಹಿಂದುಳಿಯಲು ಕಾರಣರಾಗಿದ್ದಾರೆ. ಅದಕ್ಕಾಗಿ ಇಲ್ಲಿ ಬದಲಾವಣೆಯ ಅಗತ್ಯವಿದೆ ಎಂದರು. *ವಿಜಯದ ರಥ ಯಾತ್ರೆ* ನಾಳೆ ಗುಜರಾತ್, ಹಿಮಾಚಲ್ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದೆ. ನಾಳೆ ಇಷ್ಟುಹೊತ್ತಿಗೆ ಇಡೀ ಭಾರತದಲ್ಲಿ ಭಾಜಪ ಗುಜರಾತ್ ಮತ್ತು ಹಿಮಾಚಲ್ ಪ್ರದೇಶದ ವಿಜಯೋತ್ಸವವನ್ನು ಆಚರಿಸುತ್ತೇವೆ. ವಿಜಯದ ರಥ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರೆದು 2023 ರಲ್ಲಿ ಭಾಜಪ ವಿಜಯಶಾಲಿಯಾಗಲಿದೆ. ಪ್ರತಿ ತಾಲ್ಲೂಕು, ಜಿಲ್ಲೆಯಲ್ಲಿ ಸಭೆಗಳಲ್ಲಿ...
Politics News

ಕಾಂಗ್ರೆಸ್ ಸಂವಿಧಾನ ತಿರುಚಿದೆ: ಸಿಎಂ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಸಂವಿಧಾನವನ್ನು ತಿರುಚಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
1 4 5 6
Page 6 of 6