This is the title of the web page
This is the title of the web page

archiveಮುಗಿದ

Politics News

ಗಡಿ ವಿವಾದ ಮುಗಿದ ಅಧ್ಯಾಯ : ಬೊಮ್ಮಾಯಿ ದುರ್ಬಲ ಸಿಎಂ

K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ದುರ್ಬಲ ಮುಖ್ಯಮಂತ್ರಿ ಆಗಿರುವುದರಿಂದ ಮತ್ತೆ ಮತ್ತೆ ಈ ಗಡಿ ವಿವಾದ ಮುನ್ನೆಲೆಗೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಹಾಗೂ ಮಹಾರಾಷ್ಟ್ರಗಳ ಗಡಿ ವಿವಾದ ಈಗಾಗಲೇ ಮುಗಿದ ಅಧ್ಯಾಯ. ಆದರೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆಯನ್ನು ಅಮಿತ್‌ ಶಾ ಕರೆಯುವ ಅಗತ್ಯವಿರಲಿಲ್ಲ. ರಾಜಕಾರಣಕ್ಕಾಗಿ ಮಹಾರಾಷ್ಟ್ರದವರು ಗಡಿಕ್ಯಾತೆ ತೆಗೆಯುತ್ತಿದ್ದಾರೆ. ಸದ್ಯಗಡಿ ವಿಷಯದಲ್ಲಿ ಸಮಸ್ಯೆಯೇ ಇಲ್ಲ. ನೆಲ, ಜಲ, ಭಾಷೆಯ ವಿಷಯದಲ್ಲಿ ನಾವು ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಅಂಗವಾಗಿರುವ ಬೆಳಗಾವಿಯ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು....