ರಾಯಚೂರು : ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿ ವಿಳಂಬಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರ ವಿರುದ್ದ ಡಿಸೆಂಬರ್ 30 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು...
ಸಿಂಧನೂರು : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾಧ್ಯಕ್ಷರಾದ ಹುಲಗಯ್ಯ ತಿಳಿಸಿದರು. ರೈತರ ಪಂಪ್‌ಸೇಟ್‌ಗಳಿಗೆ ಮೀಟರ್ ಅಳವಡಿಕೆ ತೆಗೆಯಬೇಕು. ಭತ್ತಕ್ಕೆ ಪ್ರೋತ್ಸಾಹ ಧನ ನೀಡಬೇಕು. ಕುಚಲ ಅಕ್ಕಿಗೆ ಒಂದು ಕ್ವಿಂಟಲ್ ಗೆ 500 ರೂ. ಸಹಾಯ ಧನ ನೀಡುವುದು ಸೇರಿದಂತೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಬೆಳಗಾವಿ ಮುತ್ತಿಗೆ ಹಾಕುವ ಕಾರ್ಯಕ್ರಮ ಕ್ಕೆ ಹೋಗಲು ಡಿ.18 ರಂದು ಸಿಂಧನೂರು ದಿಂದ ನೂರಾರು ಸಂಖ್ಯೆಯಲ್ಲಿ ರೈತರ ತೆರಳುತ್ತಿದ್ದೇವೆ ಎಂದು ಹುಲಗಯ್ಯ ತಿಳಿಸಿದರು....
ರಾಯಚೂರು : ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 5 ರಂದು ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹ ನಾಯಕ ಹೇಳಿದರು. ಕೇಂದ್ರ ಸರಕಾರ ವಾಪಸ್ಸು ಪಡೆದ ರೀತಿಯಲ್ಲಿ ರಾಜ್ಯ ಸರಕಾರವು ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ಸುಪಡೆಯಬೇಕು.ರೈತರ ಬೆಳೆದಂತ ಎಲ್ಲಾ ಬೆಳೆಗೆ ಕಾನೂನಾತ್ಮಕ ಬೆಳೆ ನಿಧಿಪಡಿಸಬೇಕು. ರೈತರ ಪಂಪ್‌ಸೇಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸುವುದನ್ನು ರದ್ದುಪಡಿಸಬೇಕು. ಆಲಮಟ್ಟಿ ಡ್ಯಾಂ ಜಲಾಶಯ 512 ಮೀಟರ್ ನಿಂದ 526 ಮೀಟರ್ ನಿಂದ ಎತ್ತರಿಸಲು ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದ್ಯಾಂತ ತೀವ್ರ ಮಳೆಯಿಂದ ರೈತರು ಬೆಳೆದ ಬೆಳೆ ಹಾನಿಯಾಗಿದ್ದು,2018- 2022 ರ ವರೆಗೆ ನಮ್ಮ ಸಂಘಟನೆ ಕೇಂದ್ರ ಮಾದರಿಯಲ್ಲಿ ಹೆಕ್ಟರ್‌ಗೆ ರೂ.೩೫ ಸಾವಿರ ಧನ ಸಹಾಯ ಬಿಡುಗಡೆ ಮಾಡಬೇಕು...