K2 ನ್ಯೂಸ್ ಡೆಸ್ಕ್: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು....