K2 ಕೊವಿಡ್ ನ್ಯೂಸ್ : ವಿವಿಧ ದೇಶಗಳಲ್ಲಿ ಕೊರೊನಾ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ಸಹ ಎಚ್ಚೆತ್ತುಕೊಂಡಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಯ...
K2 ನ್ಯೂಸ್ ಡೆಸ್ಕ್ : ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಯಿಸಿ, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿಯಾವುದೇ ಗೊಂದಲವಿಲ್ಲ ಎಂದರು....