K2 ಪೊಲಿಟಿಕಲ್ ನ್ಯೂಸ್ : ನಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಯಾರೇ ಮುಖ್ಯಮಂತ್ರಿ, ಸಚಿವರಾದರೂ ಅವರಿಗೆ ನನ್ನ ಬೆಂಬಲವಿರುತ್ತದೆ. ಮುಖ್ಯಮಂತ್ರಿ, ಸಚಿವ ಸ್ಥಾನಕ್ಕೆ ಅವರು ಬೇಡ, ಇವರು ಬೇಡ ಎಂದು ಹೇಳುವುದಿಲ್ಲ. ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿರುತ್ತದೆ ಎಂದು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವೇ ಕಚ್ಚಾಡಿದರೆ ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ. ನಾವೆಲ್ಲರೂ ಒಂದಾದರೆ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ. ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಆಗಲಿ ಎಂದು ಖರ್ಗೆ ಹೇಳಿದ್ದಾರೆ. ನಾವೆಲ್ಲರೂ ಒಂದಾದರೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಗೆಲುವು ಸಾಧಿಸುತ್ತೇವೆ. ಒಂದಾಗಿ ಕೆಲಸ ಮಾಡದಿದ್ದರೆ ಜನರಿಗೆ ಮೋಸ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ...