This is the title of the web page
This is the title of the web page

archiveಪರಿಷ್ಕರಣ

Politics News

ಮತ ಪಟ್ಟಿ ಪರಿಷ್ಕರಣ ಕಾರ್ಯಕ್ಕೆ ಶಿಕ್ಷಕರ ನೇಮಕ : ಪಾಠಕ್ಕೆ ಕುತ್ತು..!

K2 ನ್ಯೂಸ್ ಡೆಸ್ಕ್ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 60,000 ಶಿಕ್ಷಕರನ್ನ ನಿಯೋಜಿಸಿಕೊಂಡಿದ್ದು ಎಲ್ಲೋ ಒಂದು ಕಡೆ ಶೈಕ್ಷಣಿಕ ಹಿನ್ನಡೆಯಾಗುವ ಆತಂಕ ಕಾಡುತ್ತಿದೆ. ಚುನಾವಣಾ ಆಯೋಗ ರಾಜ್ಯದಲ್ಲಿರುವ 45 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಇರುವ ಮಕ್ಕಳಿಗೆ ಪಾಠ ಮಾಡಲು 1.56 ಲಕ್ಷ ಶಿಕ್ಷಕರಿದ್ದು, ಈ ಪೈಕಿ ಸುಮಾರು 60 ಸಾವಿರ ಶಿಕ್ಷಕರನ್ನು ಚುನಾವಣಾ ಮತದಾರ ಪಟ್ಟಿಪರಿಷ್ಕರಣೆಗೆ ಬ್ಲಾಕ್‌ ಹಂತದ ಅಧಿಕಾರಿಗಳಾಗಿ (ಬಿಎಲ್‌ಒ) ನಿಯೋಜಿಸಲಾಗಿದೆ. ರಾಜ್ಯ ಚುನಾವಣಾ ಆಯೋಗ ಶಿಕ್ಷಕರ ಜತೆಗೆ ವಿವಿಧ ಇಲಾಖೆಗಳ ನೌಕರರನ್ನು ಮತದಾರ ಪಟ್ಟಿಪರಿಷ್ಕರಣೆಗೆ ನೇಮಿಸಿಕೊಳ್ಳಲು ಸೂಚಿಸಿದ್ದರೂ ಶಿಕ್ಷಕರನ್ನೇ ಹೆಚ್ಚಾಗಿ ನಿಯೋಜಿಸಿಕೊಂಡಿರುವುದಕ್ಕೆ ಶಿಕ್ಷಕರು, ಪೋಷಕರು ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿ ಶಾಲೆಯಲ್ಲಿ ಒಬ್ಬ ಶಿಕ್ಷಕರನ್ನು...