This is the title of the web page
This is the title of the web page

archive#Basavaraj Bommai

State News

ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರಕಾರ ಬದ್ಧ: ಮುಖ್ಯಮಂತ್ರಿ

K2 ನ್ಯೂಸ್ ಡೆಸ್ಕ್ : ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರಕಾರದ ಸಂಕಲ್ಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು. ಸುಮಾರು 2739 ಕೋಟಿ ರೂ.ಗಳ ಅನುದಾನವನ್ನುಂಕಳೆದ ಮೂರೂವರೆ ವರ್ಷಗಳಲ್ಲಿ ತಂದು ವಿವಿಧ ಇಲಾಖೆಗಳ ಅಭಿವೃದ್ಧಿ ಮಾಡಿ, ನೀರಾವರಿ, ಮೂಲಭೂತ ಸೌಕರ್ಯ, ವಿದ್ಯುತ್, ಶಿಕ್ಷಣ, ಆಸ್ಪತ್ರೆ, ಬ್ಯಾರೇಜ್ ನಿರ್ಮಾಣ, ಬೃಹತ್ ನೀರಾವರಿ ಯೋಜನೆಗಳನ್ನು ಈ ಕ್ಷೇತ್ರ ಕ್ಕೆ ತಂದು ಜಲಜೀವನ್ ಮಿಷನ್ ಅಡಿ ಪ್ರರಿ ಮನೆಗೆ ಗಂಗೆಯನ್ನು ಹೊರಿಸಲಾಗಿದೆ. ಸರಕಾರ ಜನಪ್ರಿಯವಾದರೆ ಸಾಲದು, ಜನಪರ ಸರಕಾರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ ಎಂದರು. ಗಡಿಭಾಗದ ಜಿಲ್ಲೆಗಳ1800 ಗ್ರಾಮ...
State News

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ : ಸಿಎಂ

K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ...
State News

ಸಿಎಂ ಭೇಟಿ ಮಾಡಿದ ಭಾರತದ ಬ್ರಿಟಿಷ್ ಹೈ-ಕಮಿಷನರ್

K2 ನ್ಯೂಸ್ ಡೆಸ್ಕ್ : ಯು.ಕೆ. ಹೂಡಿಕೆದಾರರು ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದರು. ಅವರು ಇಂದು ತಮ್ಮನ್ನು ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು. ಕರ್ನಾಟಕ ರಾಜ್ಯವು ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೂ ಹೊಸ ನೀತಿಯನ್ನು ಜಾರಿಗೆ ತರಲಾಗಿದೆ. ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು ಯುಕೆ ಹಾಗೂ ಕರ್ನಾಟಕ ನಡುವಿನ ಬಾಂಧವ್ಯ ವಿಶೇಷವಾದುದು. ಕರ್ನಾಟಕದಲ್ಲಿರುವ ಯು.ಕೆ. ಕಂಪೆನಿಗಳ ಸಂಖ್ಯೆ ಗಣನೀಯವಾದುದು. ಒಂದು...
State News

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು : ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ

K2 ನ್ಯೂಸ್ ಡೆಸ್ಕ್ : ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಯಿಸಿ, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿಯಾವುದೇ ಗೊಂದಲವಿಲ್ಲ ಎಂದರು....
Education News

ಮಾನಸಿಕ ಒತ್ತಡವಿಲ್ಲದೆ, ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ

K2 ನ್ಯೂಸ್ ಡೆಸ್ಕ್ : ಸಾಮಾನ್ಯ ಕುಟಂಬದ ಮಗು ಯಾವುದೇ ರೀತಿಯ ಮಾನಸಿಕ ಒತ್ತಡವಿಲ್ಲದೆ, ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ 25 ನೇ ರಾಜ್ಯ ಮಟ್ಟದ ಕ್ರೀಡಾಕುಟ- ರಜತ ಚುಂಚಾದ್ರಿ ಕ್ರೀಡೋತ್ಸವ 2022 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. *ವಿಶ್ವಮಾನವರು* ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ 1.25 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಎಲ್ಲಾ ಮಕ್ಕಳಿಗೆ ಅನ್ನ, ವಿದ್ಯೆ, ಸಂಸ್ಕøತಿಯ ದಾನ ನೀಡಿ, ತಂದೆತಾಯಿಯಂತೆ ಸಲಹುತ್ತಿದ್ದಾರೆ. ದೈಹಿಕ ಶಿಕ್ಷಣ ನೀಡಿ ವಿಶ್ವಮಾನವರನ್ನಾಗಿ ಮಕ್ಕಳನ್ನು ಬೆಳೆಸುತ್ತಿದ್ದಾರೆ. ಈ ಸಂಸ್ಥಾನಕ್ಕೆ ಕೋಟಿ ನಮನಗಳು ಎಂದರು. ಯಾವುದೇ ಬೇಧಭಾವವಿಲ್ಲದೆ ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಇಲ್ಲಿಗೆ ಬಂದು ಇಂದು ನಾನು ಬಹಳ ಪುನೀತನಾಗಿದ್ದೇನೆ. ಆದಿಚುಂಚನಗಿರಿ ಸಂಸ್ಥೆ ಎಷ್ಟು ಬೆಳೆದಿದೆ ಎನ್ನುವುದಕ್ಕೆ ಈ ಕ್ರೀಡಾಕೂಟಗಳು ಸಾಕ್ಷಿಯಾಗಿವೆ ಎಂದರು. *ಶಿಕ್ಷಣದ...
State News

ರಾಜ್ಯದ ನೀರಾವರಿ ಯೋಜನೆ, ಜಲಜೀವನ್ ಮಿಷನ್ ಯೋಜನೆಗಳ ಕುರಿತು ಚರ್ಚೆ

K2 ನ್ಯೂಸ್ ಡೆಸ್ಕ್: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು....
Politics News

ಕಾಂಗ್ರೆಸ್ ಸಂವಿಧಾನ ತಿರುಚಿದೆ: ಸಿಎಂ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಸಂವಿಧಾನವನ್ನು ತಿರುಚಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
1 10 11 12
Page 12 of 12