ರಾಯಚೂರು : ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ...
ರಾಯಚೂರು : ಸಾರ್ವಜನಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರಥಮ ಚಿಕಿತ್ಸೆ ತರಬೇತಿ ನೀಡಿವುದು ತುಂಬಾ ಉಪಯುಕ್ತ, ಪ್ರಥಮ ಚಿಕಿತ್ಸೆ ಪಡೆದು ಜೀವವನ್ನು ಉಳಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸುರೇಂದ್ರ ಬಾಬು ಅಭಿಪ್ರಾಯ ಪಟ್ಟರು. ಇವರು ನಗರದ ಜಿಲ್ಲಾ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪೋಲೀಸ್ ಸಿಬ್ಬಂದಿಗಳಿಗೆ, ಹೋಮ್‌ಗಾರ್ಡ್ ಸಿಬ್ಬಂದಿಗಳಿಗೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವ ರಕ್ಷಕ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಅಪಘಾತ ಸಂಭವಿಸಿದಾಗ, ತೀವ್ರ ಹೃದಯಾಘಾತವಾದಾಗ, ಇನ್ನಿತರ ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡಿ ರೋಗಿಯನ್ನು ಆಸ್ಪತ್ರೆಗೆ ತಲುಪಿಸುವುದು ಹೇಗೆ ಎಂಬ ಕಲೆಯನ್ನು ಕಲೆತರೆ ಅವಘಡಕ್ಕೀಡಾದವರ ಜೀವ ರಕ್ಷಣೆ ಮಾಡಬಹುದು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಭೀಮರಾಯ ಅಂದಾನಿ ಅವರು ಮಾತನಾಡಿ, ಸಾರ್ವಜನಿಕ...